ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 2025-26ನೇ ಸಾಲಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಹಾಗೂ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಶೇ.45ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಅಂತಹ ವಿದ್ಯಾರ್ಥಿಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ ಸೈಟ್ https://klwbapps.karnataka.gov.in/ಗೆ ಭೇಟಿ ನೀಡಿ. ಡಿ.31ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಮಂಡಳಿಯ ಕಲ್ಯಾಣ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 31, 2025
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
• ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ/ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
• ಕಾರ್ಮಿಕರ ಮಾಸಿಕ ವೇತನ 35,000ರೂ. ಮೀರಿರಬಾರದು.
• ಒಂದು ಕುಟುಂಬದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಪ್ರೋತ್ಸಾಹಧನ ಸೌಲಭ್ಯವನ್ನು ನೀಡಲಾಗುತ್ತದೆ.
• ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇ.50 ಹಾಗೂ ಪ. ಜಾತಿ, ಪ.ಪಂಗಡದ ಅಭ್ಯರ್ಥಿಗಳು ಶೇ.45 ರಷ್ಟು ಅಂಕ ಪಡೆದಿರಬೇಕು.
ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಪಾಲಿಸಬೇಕಾದ ಸೂಚನೆಗಳು:
• ವಿದ್ಯಾರ್ಥಿಗಳ ತಂದೆ, ತಾಯಿ ಹಾಗೂ ಅರ್ಜಿ ಸಲ್ಲಿಸುತ್ತಿರುವ ವಿದ್ಯಾರ್ಥಿ (ಮೂರು ಜನರ) ಆಧಾರ್ ಕಾರ್ಡ್, ಪಾಸ್‌ಬುಕ್ ಜೆರಾಕ್ಸ್ ಪ್ರತಿ ಲಗತ್ತಿಸುವಾಗ Account Number ಮತ್ತು IFSC Code, ಪದವಿ, ಸ್ನಾತಕೋತ್ತರ ಮತ್ತು ಇಂಜೀನಿಯರಿಂಗ್ & ಮೆಡಿಕಲ್ ವಿದ್ಯಾರ್ಥಿಗಳ ಅಂಕಪಟ್ಟಿ ವಿವರ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಅಂಕಪಟ್ಟಿಯಲ್ಲಿನ ವಿವರಗಳು ಸ್ಪಷ್ಟವಾಗಿ ಇರಬೇಕು ಜೊತೆಗೆ ಹಿಂದಿನ ಎರಡು ಸೆಮಿಸ್ಟರ್‌ಗಳ ಅಂಕಪಟ್ಟಿಯನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ತಪ್ಪಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
• ತಂದೆ ಅಥವಾ ತಾಯಿ ಮರಣ ಹೊಂದಿದ್ದಲ್ಲಿ, ಅವರ ಮರಣ ಪ್ರಮಾಣ ಪತ್ರ ಅಪ್ಲೋಡ್ ಮಾಡಬೇಕು. ತಪ್ಪಿದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
How to Apply for KLWB Educational Assistance Application 2025-26
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
- ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ ಸೈಟ್ https://klwbapps.karnataka.gov.in/ಗೆ ಭೇಟಿ ನೀಡಿ.
- ಅಧಿಸೂಚನೆಗಳು ವಿಭಾಗದಲ್ಲಿ “ಶೈಕ್ಷಣಿಕ ಸಹಾಯಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ” ಲಿಂಕ್ ಮೇಲೆ ಟ್ಯಾಪ್ ಮಾಡಿ.
- ನಂತರ ಇ-ಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
- ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022. ಇಲ್ಲಿ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಅಥವಾ ದೂ.ಸಂ-080-23475188 ಹಾಗೂ ಮೊ.ಸಂ-8277291175, 8277120505, 9141585402, 9141602562 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Important Direct Links:
| KLWB Educational Assistance Application 2025-26 Link | Apply Now |
| Official Website | klwb.karnataka.gov.in |
| More Updates | KarnatakaHelp.in |
Help
Help
Scroller ship
Soumya sidlingappa hadapad
Mounesh
Hi
Still my ssp scholarship was not came
When ut will come
Huligesha
Hi
I want to scholarship please
Sonia to beat
I want to scholarship please
Help
Gangur
Still I am didn’t get scholarship please send me
I want scholarship
I want scholarship
RADHA S
Me college amount to in help you with me your please help me
Please give a scholarships please
Mallesh adderi
I want a scholarship… 🙏