KMDC Direct Loans for Business Enterprise Application 2025-26
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ನೀಡಲು ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ ಜನಾಂಗದ ಅಭ್ಯರ್ಥಿಗಳಿಗೆ ಸ್ವ ಉದ್ದಿಮೆ ಹಾಗೂ ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕವಾಗಿ ಸಹಾಯ ಒದಗಿಸುವ ನಿಟ್ಟಿನಲ್ಲಿ ಫಲಾನುಭವಿಯ ಕಟ್ಟಡ ಅಥವಾ ಆಸ್ತಿಯ ಆಧಾರದ ಮೇಲೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KMDC ಅಧಿಕೃತ ವೆಬ್ಸೈಟ್ https://kmdconline.karnataka.gov.in/Portal/homeಗೆ ಭೇಟಿ ನೀಡಿ. ಅ.16 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
• ನಿಗಮಕ್ಕೆ ಆಸ್ತಿಯ (ಕಟ್ಟಡ/ಭೂಮಿ) ಅಡಮಾನದ ಮೇಲೆ ಮಾತ್ರ ಸಾಲವನ್ನು ಒದಗಿಸಲಾಗುತ್ತದೆ. ಆಸ್ತಿಯ ಮೌಲ್ಯವು ಸಾಲದ ಮೊತ್ತಕ್ಕಿಂತ ಕಡಿಮೆಯಿರಬಾರದು.
• ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ವ್ಯಾಪಾರ ಉದ್ದಿಮೆ ಸಾಲವನ್ನು ನೀಡಲಾಗುತ್ತದೆ.
ಯೋಜನೆಯ ಅಡಿಯಲ್ಲಿ ಒದಗಿಸುವ ಸಾಲ ಸೌಲಭ್ಯದ ಮಾಹಿತಿ:
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 8 ಲಕ್ಷರೂ.ಗಳಿಗಿಂತ ಕಡಿಮೆ ಇರುವ ಅರ್ಜಿದಾರರಿಗೆ 20 ಲಕ್ಷರೂ.ವರೆಗೆ ಶೇ.4 ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 8 ಲಕ್ಷರೂ.ಗಳಿಂದ 15 ಲಕ್ಷರೂ.ಗಳವರೆಗೆ ಇರುವ ಅರ್ಜಿದಾರರಿಗೆ 20 ಲಕ್ಷರೂ.ವರೆಗೆ ಶೇ.6 ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು.
ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ ಮತ್ತು ಆದಾಯ ಪ್ರಮಾಣಪತ್ರ
ಆಸ್ತಿಯ ಗುತ್ತಿಗೆ ಪತ್ರ/ವಿಭಜನಾ ಪತ್ರ/ಬಿಡುಗಡೆ ಪತ್ರ/ಗಿಫ್ಟ್ ಡೀಡ್/ಮಾರಾಟ ಪತ್ರ
ಸಿಎ( ಚಾರ್ಟೆಡ್ ಅಕೌಂಟೆಂಟ್) ವತಿಯಿಂದ ದೃಢೀಕರಿಸಿದ ಯೋಜನಾ ವರದಿ/ಚಟುವಟಿಕೆಗಳ ವಿವರ
ಯೋಜನೆಗೆ ಸಂಬಂಧಿಸಿದ ದರಪಟ್ಟಿಗಳು
ಅಡಮಾನ ಮಾಡುವ ಸ್ವತ್ತಿಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳಿಂದ ಪಡೆದ ಪರವಾನಿಗೆ ಪತ್ರ
ಕಟ್ಟಡದ ಖಾತಾ ಎಕ್ಸಟ್ರಾಕ್ಟ್ ಮತ್ತು ಖಾತಾ ಪ್ರಮಾಣ ಪತ್ರ ಅಥವಾ ಭೂಮಿಯ ಹಕ್ಕು ಬದಲಾವಣೆ ಪ್ರತಿ
ಕಂದಾಯ ಜಮೀನಿನ ಪಹಣಿ ಮತ್ತು ಪೋಡಿ/ವಿಭಜನಾ ಪತ್ರ
ಋಣಭಾರ ಪ್ರಮಾಣ ಪತ್ರ (ಇಸಿ) ಫಾರಂ ನಂ15
ಸ್ಥಳೀಯ ಸಂಸ್ಥೆಗಳ ಇತ್ತೀಚಿನವರೆಗೆ ತೆರಿಗೆ ಪಾವತಿಸಿದ ರಸೀದಿ
ಜಮೀನಿನ ಮಾರ್ಗದರ್ಶಿ ಬೆಲೆ
ಸ್ವತ್ತನ್ನು ಅಡಮಾನು ಮಾಡಲು ಕುಟುಂಬ ಸದಸ್ಯರ ನಿರಾಕ್ಷೇಪಣಾ ಪತ್ರ ವಂಶವೃಕ್ಷದೊಂದಿಗೆ.
ಸ್ವಯಂ ಘೋಷಣೆ ಪತ್ರ
ಕಟ್ಟಡವಾಗಿದ್ದಲ್ಲಿ ನೋಂದಾಯಿತ ಮೌಲ್ಯಮಾಪಕರಿಂದ ಮೌಲ್ಯಮಾಪನ ವರದಿ/ಮೌಲ್ಯಮಾಪನ ಪ್ರಮಾಣಪತ್ರ
ಅರ್ಜಿ ಶುಲ್ಕ
ಉಲ್ಲೇಖಿಲಾಗಿರುವುದಿಲ್ಲ
ಅರ್ಜಿ ಹೀಗೆ ಸಲ್ಲಿಸಿ…
• ಮೊದಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್https://kmdconline.karnataka.gov.in/Portal/home ಗೆ ಭೇಟಿ ನೀಡಿ.
• “ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ವಿವಿಧ ಯೋಜನೆಗಳು (2025-26)” ವಿಭಾಗದ ಕೆಳಗೆ ನೀಡಲಾಗಿರುವ – ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ ಆಯ್ಕೆಯ ಮೇಲೆ ಟ್ಯಾಪ್ ಮಾಡಿ.
• ನಂತರ “ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ ಅರ್ಜಿದಾರರ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ಮೂಲಕ ಕಳುಹಿಸಲಾಗುವ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
KMDC Direct Loans for Business Enterprise Online Form 2025-26 Link