ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ “ಸಾಂತ್ವನ ಯೋಜನೆ”ಯಡಿಯಲ್ಲಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ಕೋಮು ಗಲಭೆ, ಹಿಂಸಾಚಾರದ ಜನರು ಮತ್ತು ಪ್ರಕೃತಿ ವಿಕೋಪಗಳಿಂದ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ ಸಮುದಾಯದವರ ವ್ಯಾಪಾರ ಕೇಂದ್ರಗಳು ಮತ್ತು ವಾಸದ ಮನೆಗಳು ನಾಶ/ಹಾನಿಗೊಳಗಾಗಿದ್ದರೆ ಅಂತಹ ಸಂದರ್ಭದಲ್ಲಿ ಸಂತ್ರಸ್ತರಿಗೆ ನಿಗಮದಿಂದ ಕಡಿಮೆ ಬಡ್ಡಿದರದಲ್ಲಿ ಸಹಾಯಧನದ ಜೊತೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ.
ಸದರಿ ಯೋಜನೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ಜಾಲತಾಣ https://kmdconline.karnataka.gov.in/Portal/homeನ ಮೂಲಕ ಅ.16 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 16, 2025
2.50 ಲಕ್ಷ ಸಹಾಯಧನ | 2.50 ಲಕ್ಷ ಸಾಲ ಸೌಲಭ್ಯ..
ಪರಿಸರ/ಪ್ರಕೃತಿ ವಿಕೋಪಗಳಿಂದ ವ್ಯಾಪಾರ ಕೇಂದ್ರಗಳು ಮತ್ತು ವಾಸದ ಮನೆಗಳು ನಾಶ/ಹಾನಿಗೊಳಗಾಗಿ ಕನಿಷ್ಠ 2 ರೂ. ಲಕ್ಷ ನಷ್ಟವಾದರೆ ಸಾಲ ಸೌಲಭ್ಯ ನೀಡಲಾಗುವುದು. ಆದರೆ ಕೋಮು ಗಲಭೆ, ಹಿಂಸಾಚಾರವಾದ ಸಂದರ್ಭದಲ್ಲಿ ವಿಶೇಷ/ದುರ್ಬಲವರ್ಗದ ಫಲಾನುಭವಿಗಳಿಗೆ ಗರಿಷ್ಠ 5 ಲಕ್ಷ ರೂ.ಗಳ ಘಟಕ ವೆಚ್ಚಕ್ಕೆ ಶೇ.50 ರಷ್ಟು ಸಹಾಯಧನವಿರುತ್ತದೆ ಜೊತೆಗೆ ಶೇ.3ರ ಬಡ್ಡಿ ದರದಲ್ಲಿ ಶೇ.50ರಷ್ಟು ಸಾಲ ಒದಗಿಸಲಾಗುತ್ತದೆ.
ವಯೋಮಿತಿ:
ಕನಿಷ್ಠ ಮಿತಿ – 18 ವರ್ಷಗಳು
ಗರಿಷ್ಠ ಮಿತಿ – 55 ವರ್ಷಗಳು
ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು?
• ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
• ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿರಬೇಕು.
• ಕುಟುಂಬದ ವಾರ್ಷಿಕ ಆದಾಯವು 8 ಲಕ್ಷರೂ.ಗಳಿಗಿಂತ ಕಡಿಮೆ ಇರಬೇಕು.
• ಸಂತ್ರಸ್ತ ಫಲಾನುಭವಿಗಳು ಸಂಬಂದಪಟ್ಟ ಸಕ್ಷಮ ಪ್ರಾಧಿಕಾರದಿಂದ ವರದಿ ಪಡಿದಿರಬೇಕು.
• ಅರ್ಜಿದಾರರ ಕುಟುಂಬದ ಸದಸ್ಯರಲ್ಲಿ ಯಾರೊಬ್ಬರು ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರಿಯಲ್ಲಿರಬಾರದು.
• ಅರ್ಜಿದಾರರು ಅಥವಾ ಅವರ ಕುಟುಂಬದವರು ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಲ್ಲಿ (ಅರಿವು ಮತ್ತು ವಿದೇಶ ವಿದ್ಯಾಭ್ಯಾಸ ಸಾಲ ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯ ಪಡೆದಿರಬಾರದು.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
ಅರ್ಜಿದಾರರ ಇತ್ತೀಚಿ 2 ಪಾಸ್ಪೋರ್ಟ್ ಅಳತೆಯ ಭಾವ ಚಿತ್ರ
ಅರ್ಜಿದಾರರ ಚಾಲ್ತಿಯಲ್ಲಿರುವ ಅಲ್ಪಸಂಖ್ಯಾತ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ
ಆಧಾರ್ ಕಾರ್ಡ್ ಪ್ರತಿ
ವೈದ್ಯರ ಬ್ಯಾಂಕ್ ಬುಕ್ ಪ್ರತಿ
ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ
ಸ್ವಯಂ ಘೋಷಣೆ ಪತ್ರ
ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ತೀರ್ಪು/ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ವರದಿ.
ಅರ್ಜಿ ಸಲ್ಲಿಸುವುದು ಹೇಗೆ?
• ಮೊದಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್https://kmdconline.karnataka.gov.in/Portal/homeಗೆ ಭೇಟಿ ನೀಡಿ.
• “ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ವಿವಿಧ ಯೋಜನೆಗಳು (2025-26)” ವಿಭಾಗದ ಕೆಳಗೆ ನೀಡಲಾಗಿರುವ – *ಸಾಂತ್ವನ ಯೋಜನೆ* ಆಯ್ಕೆಯ ಮೇಲೆ ಟ್ಯಾಪ್ ಮಾಡಿ.
• ನಂತರ “ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ ಅರ್ಜಿದಾರರ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ಮೂಲಕ ಕಳುಹಿಸಲಾಗುವ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
Kmdc Loan And Subsidy Scheme Online Application 2025-26
• ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ನಂತರ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.