ಗ್ರೂಪ್-ಡಿ ಹುದ್ದೆಗಳ ಭರ್ತಿಗಾಗಿ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.
ಸಿವಿಲ್ ಎಂಜಿನಿಯರಿಂಗ್ ಹಾಗೂ ಆಪರೇಟಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಾದ ಟ್ರ್ಯಾಕ್ ನಿರ್ವಹಣೆಗಾರ-35 ಹುದ್ದೆಗಳು ಹಾಗೂ ಪಾಯಿಂಟ್ಸ್ ಮ್ಯಾನ್- 44 ಹುದ್ದೆಗಳು ಒಟ್ಟು- 79 ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್
https://konkanrailway.com/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 23, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 12, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ(SSLC) ಉತ್ತೀರ್ಣರಾಗಿರಬೇಕು.
ವಯೋಮಿತಿ:
01-08-2025 ರಂತೆ;
ಕನಿಷ್ಠ ಮಿತಿ – 18 ವರ್ಷಗಳು
ಗರಿಷ್ಠ ಮಿತಿ – 45 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ವಿಧಾನ:
- ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
- ದಾಖಲೆ ಪರಿಶೀಲನೆ
- ದೈಹಿಕ ದಕ್ಷತೆ ಪರೀಕ್ಷೆ (PET)
- ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ – 885 ರೂ.
How to Apply for Konkan Railway Group D Recruitment 2025
ಅರ್ಜಿ ಸಲ್ಲಿಸುವ ವಿಧಾನ;
- ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್
https://konkanrailway.com/ಗೆ ಭೇಟಿ ನೀಡಿ. - ನೇಮಕಾತಿ ವಿಭಾಗದಲ್ಲಿ ಪ್ರಸ್ತುತ ಅಧಿಸೂಚನೆಗಳು ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಟ್ರ್ಯಾಕ್ ಮೇಂಟೇನರ್ ಮತ್ತು ಪಾಯಿಂಟ್ಸ್‌ಮನ್ ಹುದ್ದೆಗಳಿಗೆ ನೇಮಕಾತಿ ಅರ್ಜಿ ನಮೂನೆ -2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿ ಮಾಡಿ. ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Official Notification PDF | Download |
Online Application Form Link (ಜು.23 ರಿಂದ) | Soon |
Official Wesbiste | konkanrailway.com |
More Updates | Karnataka Help.in |