ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ

Published on:

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆಯಾಗಿದೆ.

ಒಟ್ಟು 02 ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಕಾನೂನು ವಿಷಯಗಳ ಸಂಬಂಧಿತ ಕಾರ್ಯ ನಿರ್ವಹಿಸಲು 02 ವರ್ಷಗಳ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದ್ದು, ಆಸಕ್ತ ಕಾನೂನು ಪದವೀಧರ ಅಭ್ಯರ್ಥಿಗಳು ಜೂ.22ರೊಳಗೆ KPCL ಅಧಿಕೃತ https://kpcl.karnataka.gov.in/18/careers–and–recruitment/kn ಜಾಲತಾಣದ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಇ-ಮೇಲ್‌ ವಿಳಾಸ kpclcontractappt@gmail.comಕ್ಕೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜೂನ್ 12, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 22, 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 40% ಅಂಕಗಳೊಂದಿಗೆ (ಮೂರು ಅಥವಾ ಐದು ವರ್ಷಗಳ) ಕಾನೂನು ಪದವಿ ಪೂರ್ಣಗೊಳಿಸಿರಬೇಕು ಮತ್ತು ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ನೋಂದಣೆ ಪ್ರಮಾಣ ಪತ್ರ ಹೊಂದಿರಬೇಕು.

ವಯೋಮಿತಿ:

ಕನಿಷ್ಠ ವಯಸ್ಸಿನ ಮಿತಿ – 28 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ – 56 ವರ್ಷಗಳು.

ವೇತನ:

ಅಭ್ಯರ್ಥಿಗಳಿಗೆ ರೂ.65,000ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

  • ಸಂದರ್ಶನ
  • ದಾಖಲಾತಿಗಳ ಪರಿಶೀಲನೆ

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ

• ಮೊದಲಿಗೆ ಅಭ್ಯರ್ಥಿಗಳು KPCL ಅಧಿಕೃತ https://kpcl.karnataka.gov.in/18/careers–and–recruitment/kn ಜಾಲತಾಣಕ್ಕೆ ಭೇಟಿ ನೀಡಿ.

• ನಂತರ *Notification for Appointment of ALO on Contract Basis – 2026 – Form Download* ಲಿಂಕ್ ಮೇಲೆ ಕ್ಲಿಕ್ ಮಾಡಿ.

• ಅರ್ಜಿ ನಮೂನೆಯ ನೇರ ಡೌನ್ಲೋಡ್ ಲಿಂಕ್ – https://kpcl.karnataka.gov.in/uploads/media_to_upload1781240113.pdf

• ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ, ಭಾವಚಿತ್ರ, ಶೈಕ್ಷಣಿಕ ಮಾಹಿತಿ, ಅನುಭವ ಸಂಬಂಧಿತ ದಾಖಲಾತಿ/ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.

• ಜೂನ್ 22ರೊಳಗೆ ಈ ಇ-ಮೇಲ್‌ kpclcontractappt@gmail.com ವಿಳಾಸಕ್ಕೆ ಕಳುಹಿಸಬೇಕು.

Important Direct Links:

Official Notification PDFDownload
E-Mail Address Linkkpclcontractappt@gmail.com
Official Websitehttps://kpcl.karnataka.gov.in/
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

2 thoughts on “ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ”

Leave a Comment