ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್)ದಲ್ಲಿನ ವಿವಿಧ ಹುದ್ದೆಗಳ ಭರ್ತಿಗಾಗಿ ನಡೆಸಲಿರುವ ಮರು ಪರೀಕ್ಷೆ ಮತ್ತು ಕಡ್ಡಾಯ ಕನ್ನಡ ಪರೀಕ್ಷೆಯ ವೇಳಾಪಟ್ಟಿ ಹಾಗೂ ಬೆಲ್ ಸಮಯಗಳ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಬಿಡುಗಡೆಗೊಳಿಸಿದೆ.
ಕೆಪಿಸಿಎಲ್‌ನ ಎಇ, ಜೆಇ (ವಿವಿಧ ವಿಭಾಗಗಳಲ್ಲಿನ), ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಲಾಗುವ (ವಿವಿಧ ವಿಷಯಗಳ) ಮರು ಪರೀಕ್ಷೆ ಡಿಸೆಂಬರ್ 27 ಹಾಗೂ 28 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಪರೀಕ್ಷೆಯ ವೇಳಾಪಟ್ಟಿ ಹಾಗೂ ಬೆಲ್ ಸಮಯದ ವಿವರಗಳನ್ನು ಕೆಇಎ ಅಧಿಕೃತ ಜಾಲತಾಣ https://cetonline.karnataka.gov.in/KEA/indexnewದಲ್ಲಿ ಬಿಡುಗಡೆ ಮಾಡಲಾಗಿದೆ. ಸದರಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ವೇಳಾಪಟ್ಟಿ ಹಾಗೂ ಬೆಲ್ ಸಮಯದ ವಿವರಗಳನ್ನು ಪರಿಶೀಲಿಸಬಹುದು.
• ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು 28-12-2025 ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಒಟ್ಟು 100 ಅಂಕಗಳಿಗೆ ನಡೆಸಲಾಗುತ್ತದೆ.
• ಕೆಮಿಕಲ್ ಸೂಪರ್ ವೈಸರ್ & ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಮೆಕ್ಯಾನಿಕಲ್ ಮತ್ತು ಇನಸ್ಟ್ರುಮೆಂಟೇಶನ್) ವಿಷಯಗಳಿಗೆ ಮರು ಪರೀಕ್ಷೆಯನ್ನು 27-12-2025 ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಒಟ್ಟು 100 ಅಂಕಗಳಿಗೆ ನಡೆಸಲಾಗುತ್ತದೆ.
• ಕೆಮಿಸ್ಟ್ & ಜೂನಿಯರ್ ಇಂಜಿನಿಯರ್ (ಸಿವಿಲ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್) ವಿಷಯಗಳಿಗೆ ಮರು ಪರೀಕ್ಷೆಯನ್ನು 28-12-2025 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 100 ಅಂಕಗಳಿಗೆ ನಡೆಸಲಾಗುತ್ತದೆ.
ಅಭ್ಯರ್ಥಿಗಳಿಗೆ ವಿಶೇಷ ಸೂಚನೆ:
ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಕ್ಯಾಲುಕುಲೇಟರ್, ಮೊಬೈಲ್ ಫೋನ್, ಬ್ಲೂಟೂತ್ ಇತ್ಯಾದಿಗಳನ್ನು ತರುವುದನ್ನು ನಿಷೇದಿಸಲಾಗಿದೆ.