KPSC KAS New Exam Date: 2023-24 ನೇ ಸಾಲಿನ ಗೆಜಿಟೆಡ್ ಪ್ರೊಬೇಷನಸ್೯ ಗ್ರೂಪ್ ಎ ಮತ್ತು ಗ್ರೂಪ್ ಬಿ ವಿರುದ್ಧದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 25ರಂದು ನಿಗದಿಪಡಿಸಲಾಗಿತ್ತು. ಆದರೆ ಅದೇ ದಿನದಂದು ಬ್ಯಾಂಕಿಂಗ್ ಪರೀಕ್ಷೆ ನಡೆಯುತ್ತಿದ್ದು, ಕೆಲವು ಅಭ್ಯರ್ಥಿಗಳು ಎರಡು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುತ್ತಿರಲಿಲ್ಲ. ಈ ಕಾರಣ ಪರೀಕ್ಷೆಯನ್ನು ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು.