ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ ಅಧಿಸೂಚಿಸಿದ್ದ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಸದರಿ ಪರೀಕ್ಷೆಗಳಿಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ KAS ಪರೀಕ್ಷೆಯನ್ನು ಆಗಸ್ಟ್ 27 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ ಪ್ರವೇಶ ಪತ್ರವೂ ಕಡ್ಡಾಯವಾಗಿದ್ದು, KPSC ಅಧಿಕೃತ ವೆಬ್‌ಸೈಟ್‌ನಲ್ಲಿ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
KPSC KAS ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ kpsc.kar.nic.in ಜನ್ಮ ದಿನಾಂಕ ಮತ್ತು ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಲೇಖನದಲ್ಲಿ KPSC KAS ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆನ್ ಲೈನ್ ಮೂಲಕ ಡೌನ್ಲೋಡ್(KPSC KAS Exam Hall Ticket 2024) ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು ಗಮನವಿಟ್ಟು ಓದಿರಿ.