ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗಾಗಿ 26 ಫೇಬ್ರುವರಿ 2024 ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿತ್ತು, ಈ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ದಿನಾಂಕ:29 ಡಿಸೆಂಬರ್ 2024ರ ಭಾನುವಾರದಂದು ಪೂರ್ವಭಾವಿ ಮರುಪರೀಕ್ಷೆಯನ್ನು ನಡೆಸಲಿದೆ. ಈ ಪರೀಕ್ಷೆಗೆ ಪ್ರವೇಶ ಪತ್ರ(KPSC KAS Re-Exam Hall Ticket 2024)ವನ್ನು ಆಯೋಗದ ವೆಬ್‌ಸೈಟ್ http://kpsc.kar.nic.inನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು ಡಿಸೆಂಬರ್ 20, 2024 ರಿಂದ ಅವಕಾಶ ಕಲ್ಪಿಸಲಾಗಿದೆ.
ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ಹಾಕುವ ಮೂಲಕ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.