ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗಾಗಿ ಡಿಸೆಂಬರ್ 29, 2024ರಂದು ಪ್ರಿಲಿಮ್ಸ್ ಮರು-ಪರೀಕ್ಷೆಯನ್ನು ನಡೆಸಿತ್ತು.
ಜನವರಿ 15, 2025 ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷೆಯ ಕೀ ಉತ್ತರಗಳ(KPSC KAS Re-Exam Key Answer 2025)ನ್ನು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು, ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಫೆ.03ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಮೊದಲು ಅಧಿಕೃತ ವೆಬ್‌ಸೈಟ್‌ಗೆ kpsc.kar.nic.in ಭೇಟಿ ನೀಡಿ.
ಮುಖಪುಟದಲ್ಲಿ ಕಾಣುವ “What is new” ವಿಭಾಗದಲ್ಲಿ ‘Key Answers for Gazetted Probationer Preliminary Re-Examination Dated 29-12-2024 is Published‘ ಲಿಂಕ್ ಕ್ಲಿಕ್ ಮಾಡಿ.
ಮತ್ತೊಂದು ವೆಬ್ ಪೇಜ್ ತೆರೆಯುತ್ತದೆ ಅಲ್ಲಿ ನೀಡಿರುವ “KEY ANSWERS” ಪಿಡಿಎಫ್ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಕೀ ಉತ್ತರಗಳ PDF ಡೌನ್ಲೋಡ್ ಮಾಡಿ