KPSC Land Surveyor Hall Ticket 2024: ಕರ್ನಾಟಕ ಲೋಕಸೇವಾ ಆಯೋಗ (KPSC) 2024 ರ ಲ್ಯಾಂಡ್ ಸರ್ವೇಯರ್ ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೈಬ್ ಸೈಟ್ ನಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ.
ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಹಾಲ್ ಟಿಕೆಟ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರವನ್ನು ಪರೀಕ್ಷಾ ಆಯೋಗವು ಪರೀಕ್ಷೆ ನಡೆಯುವ ಒಂದು ವಾರದ ಹಿಂದೆ ಬಿಡುಗಡೆ ಮಾಡಲಾಗುತ್ತದೆ. ಒಟ್ಟು 264 ಭೂಮಾಪಕರ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದ್ದು, ಅರ್ಜಿ ಸಲ್ಲಿಕೆಯು ಈಗಾಗಲೇ ಮುಕ್ತಾಯಗೊಂಡಿದೆ. ಈ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿದ್ದು ಬಹು ಆಯ್ಕೆ ಪ್ರಶ್ನೆಯ 400 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳು ಕಡ್ಡಾಯವಾಗಿದ್ದು, ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರವನ್ನು ಪಡೆದುಕೊಳ್ಳಬಹುದು. ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ https://kpsc.kar.nic.in ನಲ್ಲಿ ಪ್ರವೇಶ ಪತ್ರ ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಸಮಯದಲ್ಲಿ ಅನುಸರಿಸಬೇಕಾದ ವಸ್ತ್ರ ಸಂಹಿತೆ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಲೇಖನದಲ್ಲಿ ನಾವು KPSC ಭೂಮಾಪಕರ ನೇಮಕ 2024 ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ತಿಳಿದುಕೊಳ್ಳೋಣ.