ಕರ್ನಾಟಕ ಲೋಕಸೇವಾ ಆಯೋಗವು ಕಛೇರಿಯ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಯ ಭರ್ತಿಗಾಗಿ (KPSC Legal Advisor Recruitment 2024)ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಲೋಕಸೇವಾ ಆಯೋಗವು ಕಛೇರಿಯ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವ, ಸೇವಾ ವಿಷಯಗಳಲ್ಲಿ ನುರಿತ ಹಾಗೂ ಹೆಚ್ಚಿನ ಅನುಭವವುಳ್ಳ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸದರಿಯವರ ಸೇವೆಯನ್ನು 02 ವರ್ಷಗಳ ಅವಧಿಗೆ ನೇಮಕ ಮಾಡಲಾಗುತ್ತಿದ್ದು, 01 ವರ್ಷದ ನಂತರ ಅವರ ಕಾರ್ಯನಿರ್ವಹಣೆಯ ಆಧಾರದ ಮೇಲೆ ನಂತರದ ಮುಂದಿನ 01 ವರ್ಷದವರೆಗೆ ಮುಂದುವರೆಸಲಾಗುತ್ತೇದೆ.
ಆಸಕ್ತರು ಅರ್ಜಿಯೊಂದಿಗೆ ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ, ವಿದ್ಯಾರ್ಹತೆ, ಸೇವಾ ವಿವರಗಳನ್ನೊಳಗೊಂಡ ಸಂಪೂರ್ಣ ಮಾಹಿತಿ (Curriculum vitae) ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಧಿಸೂಚನೆ ಹೊರಡಿಸಿದ 15 ದಿನಗಳೊಳಗೆ ಮುಚ್ಚಿದ ಲಕೋಟೆಯಲ್ಲಿ ನಿಗದಿತ ಕಛೇರಿಯ ವಿಳಾಸಕ್ಕೆ ತಮ್ಮ ಅರ್ಜಿಯನ್ನು ಕಳುಹಿಸಬಹುದು.
Kpsc Legal Advisor Recruitment 2024
Shortview of KPSC Legal Advisor Notification 2024
Organization Name – Karnataka Public Service Commission Post Name – Legal Advisor Application Process: Offline Job Location – Karnataka
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 5, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 20, 2024
ಅರ್ಹತೆ ಮತ್ತು ಮಾನದಂಡ:
ಸೇವಾ ವಿಷಯಗಳಲ್ಲಿ ನುರಿತ ಹಾಗೂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸಿರಬೇಕು.
ದಿನಾಂಕ: 05-09-2024ಕ್ಕೆ 65 ವರ್ಷ ಮೀರದ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಅರ್ಜಿ ಸಲ್ಲಿಸಬಹುದು
ವೇತನ ವಿವರ:
ಸದರಿಯವರ ಸಂಭಾವನೆಯನ್ನು ಮಾಹೆಯಾನ ಶೇ.1,15,000ಗಳಿಗೆ ಹಾಗೂ ವಾಹನ ಭತ್ಯೆಯನ್ನು ಮಾಹೆಯಾನ 35,000ಗಳಿಗೆ ನಿಗದಿಪಡಿಸಲಾಗಿದೆ.
ವಯೋಮಿತಿ:
ದಿನಾಂಕ:05-09-2024ಕ್ಕೆ 65 ವರ್ಷ ಮೀರದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
How to Apply for KPSC Legal Advisor Recruitment 2024
ಅರ್ಜಿ ಸಲ್ಲಿಸುವ ವಿಧಾನ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ನಿಂದ ಅರ್ಜಿ ನಮೂನೆಯನ್ನು ಡೌನಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅರ್ಜಿಯೊಂದಿಗೆ ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ, ವಿದ್ಯಾರ್ಹತೆ, ಸೇವಾ ವಿವರಗಳನ್ನೊಳಗೊಂಡ ಸಂಪೂರ್ಣ ಮಾಹಿತಿ (Curriculum vitae) ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಿಗದಿತ ಅಂಚೆ ವಿಳಾಸಕ್ಕೆ ಸಲ್ಲಿಸಬೇಕು.
ಅಂಚೆ ವಿಳಾಸ:
ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001′