ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO Exam Date 2024) ನೇಮಕಾತಿಗಾಗಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಗೆ ಹೈದರಾಬಾದ್ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದದ ಅಭ್ಯರ್ಥಿಗಳಿಗೆ ಎರಡು ಹಂತಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಹೈದರಾಬಾದ್ ಕರ್ನಾಟಕದ ಅಭ್ಯರ್ಥಿಗಳಿಗೆ ಮೊದಲಿಗೆ ನವೆಂಬರ್ 16, 2024(ಅಪರಾಹ್ನ) ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ನವೆಂಬರ್ 17, 2024 ರಂದು ಸ್ಪರ್ಧಾತ್ಮಕ ಪರೀಕ್ಷೆಯು ನಡೆಯಲಿದೆ. ಉಳಿಕೆ ಮೂಲ ವೃಂದದ ಅಭ್ಯರ್ಥಿಗಳಿಗೆ ಡಿಸೆಂಬರ್ 7,2024 ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಡಿಸೆಂಬರ್ 8, 2024 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಹೈದರಾಬಾದ್ ಕರ್ನಾಟಕದ 97 ಉಳಿಕೆ ಮೂಲ ವೃಂದದ 150 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.