ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಒಟ್ಟು 150 ಉಳಿಕೆ ಮೂಲ ವೃಂದದ(Non HK) ಗ್ರೂಪ್-‘ಸಿ’ ಹುದ್ದೆಗಳ ನೇಮಕಾತಿಗಾಗಿ ದಿನಾಂಕ:07-12-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು 08-12-2024ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇಲಾಖೆಯು ನಡೆಸಿತ್ತು. ಸದರಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳ(KPSC PDO Non HK Key Answer 2025)ನ್ನು ಇಲಾಖೆಯು ಬಿಡುಗಡೆ ಮಾಡಿದೆ.
ಫೆ.24ರಂದು ಪ್ರಕಟಿಸಿರುವ ಕೀ ಉತ್ತರಗಳ ಮೇಲೆ ಆಕ್ಷೇಪಣೆ ಮಾರ್ಚ್ 03, 2025ರೊಳಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಏ.05 ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ.
ಮುಂದೆ “Key Answers for the post of PANCHAYAT DEVELOPMENT OFFICER(RPC) Examination held on 08-12-2024 is published” ಮೇಲೆ ಕ್ಲಿಕ್ ಮಾಡುವ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಿ.