WhatsApp Channel Join Now
Telegram Group Join Now

KPSC SAAD Hall Ticket 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

KPSC SAAD RPC Hall Ticket 2024ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ – ‘ಎ’ ಮತ್ತು ಗ್ರೂಪ್ -‘ ಬಿ’ (RPC) ಹುದ್ದೆಗಳ ಭರ್ತಿಗಾಗಿ ಪರೀಕ್ಷೆ(ಪೂರ್ವಭಾವಿ ಪರೀಕ್ಷೆ)ಯನ್ನು ನಡೆಸಲಾಗುತ್ತಿದ್ದು, ಈ ಪರೀಕ್ಷೆಗಳಿಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ.

ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟಿನಲ್ಲಿ ತಮ್ಮ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು. ಗ್ರೂಪ್ – ‘ಎ’ ಮತ್ತು ಗ್ರೂಪ್ -‘ ಬಿ’ ಹುದ್ದೆಗಳ ಒಟ್ಟು 112 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.

Kpsc Saad Hall Ticket 2024
Kpsc Saad Hall Ticket 2024

KPSC SAAD Exam Date 2024: ಈ ಪರೀಕ್ಷೆಯು ಆಗಸ್ಟ್ 11ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ ನಲ್ಲಿ ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರದಲ್ಲಿ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ವಿಷಯದ ಕುರಿತು ವಿವರಗಳನ್ನು ನೀಡಲಾಗಿರುತ್ತದೆ. ಪರೀಕ್ಷಾ ಸಮಯದಲ್ಲಿ ಅನುಸರಿಸಬೇಕಾದ ಸಲಹೆ ಸೂಚನೆಗಳನ್ನು ಪ್ರವೇಶ ಪತ್ರದಲ್ಲಿ ನೀಡಲಾಗಿದ್ದು ಅಭ್ಯರ್ಥಿಗಳು ಕಡ್ಡಾಯವಾಗಿ ಇದನ್ನು ಪಾಲಿಸಬೇಕು. ಈ ಲೇಖನದಲ್ಲಿ ನಾವು ಆನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು ಗಮನವಿಟ್ಟು ಓದಿರಿ.

How to Download KPSC SAAD Assistant Controller(Group-A ) & Audit Officer (Group-B) Hall Ticket 2024

ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ:

  • KPSC ಅಧಿಕೃತ ವೆಬ್‌ಸೈಟ್‌ಗೆ https://kpsc.kar.nic.in/ ಭೇಟಿ ನೀಡಿ.
  • “ಪರೀಕ್ಷೆಗಳು” ವಿಭಾಗಕ್ಕೆ ಹೋಗಿ.
  • “ಆನ್‌ಲೈನ್ ಅರ್ಜಿ” ಲಿಂಕ್ ಕ್ಲಿಕ್ ಮಾಡಿ.
  • ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  • “ಸಲ್ಲಿಸು” ಬಟನ್ ಕ್ಲಿಕ್ ಮಾಡಿ.
  • ನಿಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ಮಾಡಿ.

Important Direct Links:

KPSC SAAD Hall Ticket 2024 Notice PDFDownload
KPSC SAAD Hall Ticket 2024 Download LinkClick Here
Official Notification PDFDetails
Official Websitekpsc.kar.nic.in
More UpdatesKarnatakaHelp.in

Leave a Comment