ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕವಿಪ್ರನಿನಿ)ದ ಮಿಕ್ಕುಳಿದ ವೃಂದ(ಎನ್.ಕೆ.ಕೆ)ದ ಕಿರಿಯ ಪವರ್‌ಮ್ಯಾನ್ ಮತ್ತು ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಸೋಮವಾರ(ಆ.25) ಬಿಡುಗಡೆ ಮಾಡಲಾಗಿದೆ ಎಂದು ನಿಗಮದ ನಿರ್ದೇಶಕರು(ಆಡಳಿತ ಮತ್ತು ಮಾನವ ಸಂಪನ್ಮೂಲ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹನಾ ಶಕ್ತಿ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಆ.6 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಈ ಅವಧಿಯಲ್ಲಿ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಅಂತಿಮ ಆಯ್ಕೆ ಪಟ್ಟಿಯನ್ನು ಕಟ್-ಆಪ್ ಅಂಕಗಳೊಂದಿಗೆ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಕವಿಪ್ರನಿನಿ ಜಾಲತಾಣ https://kptcl.karnataka.gov.in/Recruitmentದ ಮೂಲಕ ಪರಿಶೀಲನೆ ಮಾಡಬಹುದಾಗಿದೆ ಎಂದು ಕೋರಿದ್ದಾರೆ.
When was releas the aplication of kptcl 2025