ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026-27ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಒಳಪಡುವ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ದಾಖಲಾತಿಗೆ ಸಂಬಂಧಿಸಿದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ.
ಪ್ರವೇಶ ಪರೀಕ್ಷೆ ಮಾ.01ರಂದು ನಡೆಯಲಿದೆ. ಪ್ರಸ್ತುತ 5ನೇ ತರಗತಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪ್ರಾಧಿಕಾರದ ವೆಬ್‌ಸೈಟ್ https://cetonline.karnataka.gov.in/kea/ನಲ್ಲಿ ಲಭ್ಯವಿರುವ ಘೋಷಣಾ ಪತ್ರ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ, ನಿಮಗೆ ಹತ್ತಿರವಿರುವ ಸಂಘದ ಅಧೀನದ ಯಾವುದೇ ವಸತಿ ಶಾಲೆಗೆ ಜ.25ರೊಳಗೆ ಭೇಟಿ ನೀಡಿ ಘೋಷಣಾ ಪ್ರಮಾಣ ಪತ್ರ ಸಲ್ಲಿಸಲು ಕೆಇಎ ಪ್ರಕಟಣೆ ತಿಳಿಸಿದೆ.
ಪ.ಜಾತಿ/ಪರಿಶಿಷ್ಟ ವರ್ಗ ಅಭ್ಯರ್ಥಿಗಳಿಗೆ – ₹2,50,000/- ಹಿಂದುಳಿದ ವರ್ಗದ ಪ್ರವರ್ಗ-1 ಅಭ್ಯರ್ಥಿಗಳಿಗೆ – ₹2,50,000/- ಹಿಂದುಳಿದ ವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ – ₹1,00,000/-
ಅರ್ಜಿ ಸಲ್ಲಿಸುವುದು ಹೇಗೆ?
ವಿದ್ಯಾರ್ಥಿಯ ಭಾವಚಿತ್ರ , ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲೆ ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ನಿಮಗೆ ಹತ್ತಿರದ ವಸತಿ ಶಾಲೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
Important Direct Links:
KREIS 6th Entrance Guidelines 2026-27 Information bulletin PDF(Dated on 13/01/2026)