ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಪರಿಶಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಾಲೆಗಳ ಪ್ರವೇಶಾತಿ ಪ್ರವೇಶ ಪರೀಕ್ಷೆ ನೋಂದಣಿಯ ಕೊನೆಯ ದಿನಾಂಕವನ್ನು ಫೆ.07ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಫೆ.02ರವರೆಗೆ ನೋಂದಣಿಗೆ ಅವಕಾಶವಿತ್ತು. ಪರಿಶಿಷ್ಟ ಜಾತಿಯ ಒಳವೀಸಲು ಪ್ರವರ್ಗಗಳಾದ ಪ್ರವರ್ಗ ಎ, ಪ್ರವರ್ಗ ಬಿ, ಪ್ರವರ್ಗ ಸಿ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರದಲ್ಲಿ ಮುದ್ರಿತವಾಗಿರುವ ಆರ್‌ಡಿ ಸಂಖ್ಯೆ ನಮೂದಿಸಿ, ಅರ್ಜಿಯನ್ನು ಸಲ್ಲಿಸಬೇಕು ಎಂದು ಕೆಇಎ ಪ್ರಕಟಣೆ ತಿಳಿಸಿದೆ.



