ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೊರಾರ್ಜಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 15 ರಂದು ನಡೆಸಿತ್ತು. ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಏಪ್ರಿಲ್ 22ರಂದು ಪ್ರಕಟಿಸಿತ್ತು. ಇದೀಗ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳ ಎರಡನೇ ಸುತ್ತಿನ ಸೀಟು ಹಂಚಿಕೆ(Morarji 2nd List 2025)ಯ ಫಲಿತಾಂಶವನ್ನು ಪ್ರಕಟಿಸಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ , ಅಟಲ್ ಬಿಹಾರಿ ವಾಜಪಯಿ, ಶ್ರೀಮತಿ ಇಂದಿರಾಗಾಂಧಿ, ಡಾ ಬಿ.ಆರ್.ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧಿತತ್ವ, ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ ಅಥವಾ ಆಯ್ಕೆಗಳ ಆಧಾರದ ಮೇಲೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಾಧಿಕಾರದ ವೆಬ್ಸೈಟ್ https://cetonline.karnataka.gov.in/kea/ ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಮೊದಲನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಆಯ್ಕೆಯಾಗದ ವಿದ್ಯಾರ್ಥಿಗಳು ಎರಡನೇ ಸುತ್ತಿನ ಸೀಟು ಹಂಚಿಕೆಯ ಪ್ರಕಟಣೆಗಾಗಿ ಕಾತುರದಿಂದ ಕಾಯುತ್ತಿದ್ದರು, ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜಿಲ್ಲಾವಾರು ಸೀಟು ಹಂಚಿಕೆಯ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, KEA ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. 2 ನೇ ಸುತ್ತಿನ ಪ್ರವೇಶ ಪಟ್ಟಿ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದು.
How to Download KREIS Morarji 2nd List 2025
ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ನೋಡುವುದು ಹೇಗೆ?
- • ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
- ಇತ್ತೀಚಿನ ಪ್ರಕಟಣೆಗಳಲ್ಲಿ 15-05 KREIS 6ನೇ ತರಗತಿ 2 ನೇ ಸುತ್ತಿನ ಪ್ರವೇಶ ಪಟ್ಟಿ -2025-26. 15/05/2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ.
- ಜಿಲ್ಲಾವಾರು ಪ್ರಕಟಿಸಿರುವ ಲಿಸ್ಟ್ ನಲ್ಲಿ ನಿಮ್ಮ ಸಿಇಟಿ ನಂಬರ್ ಅಥವಾ ಹೆಸರಿನ ಮೂಲಕ ನಿಮ್ಮ ರಾಂಕನ್ನು ಚೆಕ್ ಮಾಡಿಕೊಳ್ಳಿ.
ಮೊರಾರ್ಜಿ ಶಾಲೆ ಹಾಗೂ ವಿವಿಧ ವಸತಿ ಶಾಲೆಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಜಿಲ್ಲಾವಾರು ಫಲಿತಾಂಶವಿರುವ ಪಿಡಿಎಫ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ
ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಮೂಲ ದಾಖಲೆಗಳನ್ನು ಶಾಲಾ ಹಂತದಲ್ಲಿಯೇ ಪರಿಶೀಲನೆಗೆ ಒಳಪಟ್ಟು ಸರಿ ಇದ್ದಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಸಂಬಂಧಿಸಿದ ಶಾಲೆಗಳಲ್ಲಿ ಮೇ 21, 2025 ಸಂಜೆ 5.30 ರೊಳಗೆ ಪ್ರವೇಶ ಪಡೆಯಬಹುದಾಗಿದೆ.
Important Direct Links:
KEA KREIS Morarji 2nd List 2025 Notice PDF | Download |
Official Website | Kea.Kar.Nic.in |
More Updates | Karnataka Help.in |
MANVITH B
Rank-81103, sc cat. Not selected. Why
SOUJANYA S G
CET RANK 47407
Please select sir
75121 obc