KREIS Result 2025(OUT): ಮೊರಾರ್ಜಿ ಸೇರಿ ವಿವಿಧ ವಸತಿ ಶಾಲೆಗಳ 1ನೇ ಸುತ್ತಿನ ಫಲಿತಾಂಶ ಪ್ರಕಟ!

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

KEA KREIS Morarji Result 2025
KEA KREIS Result 2025

KREIS Result 2025: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೊರಾರ್ಜಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 15 ರಂದು ನಡೆಸಿತ್ತು. ಇದೀಗ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಏಪ್ರಿಲ್ 22 ರಂದು ಪ್ರಕಟಿಸಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪಯಿ, ಶ್ರೀಮತಿ ಇಂದಿರಾಗಾಂಧಿ, ಡಾ ಬಿ.ಆರ್.ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧಿತತ್ವ, ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ ಅಥವಾ ಆಯ್ಕೆಗಳ ಆಧಾರದ ಮೇಲೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಾಧಿಕಾರದ ವೆಬ್ಸೈಟ್ cetonline.karnataka.gov.in ನಲ್ಲಿ ಪ್ರಕಟಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜಿಲ್ಲಾವಾರು ಸೀಟು ಹಂಚಿಕೆಯ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ತಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದು.

ಮೊದಲು ಸುತ್ತಿನ ಸೀಟು ಹಂಚಿಕೆಯ ಜಿಲ್ಲಾವಾರು ಫಲಿತಾಂಶವಿರುವ ಪಿಡಿಎಫ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

How to Check KREIS Result 2025

ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ನೋಡುವುದು ಹೇಗೆ?

  • ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
  • ಇತ್ತೀಚಿನ ಪ್ರಕಟಣೆಗಳಲ್ಲಿ 22-04 KREIS – 6ನೇ ತರಗತಿ 1ನೇ ಸುತ್ತಿನ ವೇಳಾಪಟ್ಟಿ ಮತ್ತು ಪ್ರಕಟಣೆ 2025-26. 22/04/2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ.
  • ಜಿಲ್ಲಾವಾರು ಪ್ರಕಟಿಸಿರುವ ಲಿಸ್ಟ್ ನಲ್ಲಿ ನಿಮ್ಮ ಸಿಇಟಿ ನಂಬರ್ ಅಥವಾ ಹೆಸರಿನ ಮೂಲಕ ನಿಮ್ಮ ರಾಂಕನ್ನು ಚೆಕ್ ಮಾಡಿಕೊಳ್ಳಿ.

ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ

ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಮೂಲ ದಾಖಲೆಗಳನ್ನು ಶಾಲಾ ಹಂತದಲ್ಲಿಯೇ ಪರಿಶೀಲನೆಗೆ ಒಳಪಟ್ಟು ಸರಿ ಇದ್ದಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ದಿನಾಂಕ 29-04- 2025 ರ ಸಂಜೆ 5 ಗಂಟೆಯವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.

Important Direct Links:

KEA KREIS Morarji Result 2025 Notice PDF (Dated on 22/04/2025)Download
Official Websitekea.kar.nic.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment