ಯಾದಗಿರಿ | ಆತ್ಮ ಯೋಜನೆಯಡಿ ವಿವಿಧ ಹುದ್ದೆಗಳ ಭರ್ತಿ

Published on:

ಯಾದಗಿರಿ: ಜಿಲ್ಲಾ ಕೃಷಿ ಇಲಾಖೆಯು ಆತ್ಮ(ಅಗ್ರಿಕಲ್ಚರ್‌ ಟೆಕ್ನಾಲಜಿ ಮ್ಯಾನೇಜ್ಮೆಂಟ್‌ ಏಜೆನ್ಸಿ) ಯೋಜನೆಯಡಿ ಖಾಲಿ ಇರುವ 2 ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ(ಬಿಟಿಎಂ) ಮತ್ತು 1 ಸಹಾಯಕ ತಾಂತ್ರಿಕ ವ್ಯವಸ್ಥಾಪಕ(ಎಟಿಎಂ) ಹುದ್ದೆಗಳನ್ನು ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಟಿಎಂ ಹುದ್ದೆಗಳು ಪ.ಜಾತಿ-1 ಮತ್ತು ಪ.ಪಂಗಡ-1 ಹಾಗೂ ಎಟಿಎಂ ಹುದ್ದೆ ಸಾಮಾನ್ಯ ವರ್ಗಗಳಿಗೆ ಮೀಸಲಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಸಂಪೂರ್ಣ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆ.10ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಡಿಪಿಡಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment