ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು 2025-26ನೇ ಸಾಲಿಗೆ ಸಾಂದೀಪನಿ ಶಿಷ್ಯವೇತನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಸರ್ಕಾರವು ಸಾಂದೀಪನಿ ಶಿಷ್ಯವೇತನ ಯೋಜನೆಯು ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಅಥವಾ ಉನ್ನತ ಶಿಕ್ಷಣ ವ್ಯಾಸಂಗ ಮಾಡಲು ಶೈಕ್ಷಣಿಕ ನೆರವನ್ನು ನೀಡುವ ಗುರಿ ಹೊಂದಿದೆ. ಸದರಿ ಯೋಜನೆಯ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು 2026ರ ಫೆಬ್ರವರಿ 28ರೊಳಗೆ SSP ಅಧಿಕೃತ ಜಾಲತಾಣ https://ssp.postmatric.karnataka.gov.in/ದ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 28, 2026
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
• ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. • ವಿದ್ಯಾರ್ಥಿಗಳು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿರಬೇಕು. • ಮೆಟ್ರಿಕ್ ನಂತರದ (ಪಿ.ಯು.ಸಿ, ಡಿಪ್ಲೋಮಾ ಹಾಗೂ ಸಾಮಾನ್ಯ ಪದವಿ) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. • ಮುಂದುವರೆದಂತೆ (ಪದವಿ/ಸ್ನಾತಕೋತ್ತರ) ಪದವಿಯ0ತಹ ವಿವಿಧ ಕೋರ್ಸ್ ಗಳಿಗೆ (ಸಿಇಟಿ ಅಥವಾ UG/PG NEET) ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಅರ್ಹತೆ ಪಡೆದು ದಾಖಲಾದ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:
ಆಧಾರ್ ಸಂಖ್ಯೆ
ಮೊಬೈಲ್ ಸಂಖ್ಯೆ
ಇ-ಮೇಲ್ ಐ.ಡಿ.
ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ
ವಿದ್ಯಾರ್ಥಿಯ ಹೆಸರಿನಲ್ಲಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ
ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
ವಿದ್ಯಾರ್ಥಿಯು ವಾಸವಿರುವ ಜಿಲ್ಲೆ, ತಾಲ್ಲೂಕು, ವಿಧನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
ವಿದ್ಯಾರ್ಥಿಯ ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
ವಿದ್ಯಾರ್ಥಿಗಳು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಕಡ್ಡಾಯವಾಗಿ ತಮ್ಮ Counselling Details ಅನ್ನು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಮೂದಿಸಬೇಕು.
ಸಾಂದೀಪನಿ ಶಿಷ್ಯವತನ ಯೋಜನೆಯಲ್ಲಿ ನೀಡಲಾಗುವ ಸಹಾಯಧನದ ವಿವರಗಳು:
→ ಪಿ.ಯು.ಸಿ, ಡಿಪ್ಲೋಮಾ ಹಾಗೂ ಸಾಮಾನ್ಯ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರ್ವಹಣಾ ವೆಚ್ಚವಾಗಿ ₹15,000 (ಮಾಹೆಯಾನ 1,500 ರಂತೆ ಒಟ್ಟು 10 ತಿಂಗಳು) ಸಹಾಯಧನವನ್ನು ನೀಡಲಾಗುತ್ತದೆ.
→ ಪದವಿ/ಸ್ನಾತಕೋತ್ತರ ಪದವಿಯ ವಿವಿಧ ಕೋರ್ಸ್ ಗಳಿಗೆ (ಸಿಇಟಿ ಅಥವಾ UG/PG NEET ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಅರ್ಹತೆ ಪಡೆದು ದಾಖಲಾದ ವಿದ್ಯಾರ್ಥಿಗಳಿಗೆ ಅವರು ದಾಖಲಾತಿ ಸಂದರ್ಭದಲ್ಲಿ ಪಾವತಿಸಿರುವ ಸರ್ಕಾರಿ ಶುಲ್ಕದ 2/3 ಭಾಗವನ್ನು ಅಂದರೆ (ಗರಿಷ್ಠ ಮೊತ್ತ 01 ಲಕ್ಷರೂ. ವರೆಗೆ) ಮಿತಿಗೊಳಿಸಿ ಸಹಾಯಧನವನ್ನು ಪಾವತಿ ಮಾಡಲಾಗುತ್ತದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
ಸದರಿ ಯೋಜನೆಯ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು SSP ಅಧಿಕೃತ ಜಾಲತಾಣ https://ssp.postmatric.karnataka.gov.in/ ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ: ಕಚೇರಿ ಸಹಾಯವಾಣಿ ಸಂಖ್ಯೆ 080 2960 5888 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.