2025-26ನೇ ಶೈಕ್ಷಣಿಕ ಸಾಲಿಗೆ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿವೇತನ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸಕ್ತ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ (Local body schools) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು NMMS ಪರೀಕ್ಷೆಗೆ ಅರ್ಜಿ ಸಲ್ಲಸಲು ಅರ್ಹರು. ಸದರಿ ಪರೀಕ್ಷೆಯು ಕೆ.ಎಸ್.ಕ್ಯು.ಎ.ಎ.ಸಿ (KSQUAC)ವತಿಯಿಂದ ಡಿ.7ಕ್ಕೆ ನಡೆಯಲಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಅ.15ರೊಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿವೇತನ ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತ್ತೇಜನ ನೀಡಿವುದು ಹಾಗೂ ಆರ್ಥಿಕ ನೆರವನ್ನು ಒದಗಿಸುವ ಒಂದು ವಿದ್ಯಾರ್ಥಿ ವೇತನ ಕಾರ್ಯಕ್ರಮವಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 10, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 15, 2025
ಪರೀಕ್ಷೆಯ ದಿನಾಂಕ – ಡಿಸೆಂಬರ್ 07, 2025
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 3.50ಲಕ್ಷರೂ.ಗಳ ಮಿತಿಯಲ್ಲಿರಬೇಕು.
ವಸತಿಯುತ ಶಾಲೆಗಳ ವಿದ್ಯಾರ್ಥಿಗಳು NMMS ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. (ಉದಾ: ಮೊರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ, ನವೋದಯ ಶಾಲೆ, ವಾಜಪೇಯಿ ಶಾಲೆ, ಏಕಲವ್ಯ, ಕೆ.ಜಿ.ಬಿ.ವಿ, ಅಂಬೇಡ್ಕರ್ ವಸತಿ ಶಾಲೆ ಇತ್ಯಾದಿ) ಹಾಗೆಯೇ ಕೇಂದ್ರೀಯ ವಿದ್ಯಾಲಯ, ಸೈನಿಕ ಶಾಲೆ)
ಅರ್ಜಿ ಸಲ್ಲಿಸಬೇಕಾದ ವಿದ್ಯಾರ್ಥಿಗಳು 7ನೇ ತರಗತಿ ಪರೀಕ್ಷೆಯಲ್ಲಿ (ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಶೇ.55 ರಷ್ಟು ಅಂಕಗಳನ್ನು ಅಥವಾ ತತ್ಸಮಾನ ಗ್ರೇಡ್ ಹಾಗೂ ಪ.ಜಾ ಮತ್ತು ಪ.ಪಂಗಡದ ವಿದ್ಯಾರ್ಥಿಗಳು ಶೇ.50 ರಷ್ಟು) ಅಂಕಗಳನ್ನು ಅಥವಾ ತತ್ಸಮಾನ ಗ್ರೇಡ್ ಗಳಿಸಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು
SATS ID
ಆಧಾರ್ ಕಾರ್ಡ್ ಮತ್ತು ಆಧಾರ್ ಜೋಡಣೆಯೊಂದಿಗೆ ಬ್ಯಾಂಕ್ ಖಾತೆ ನೋಂದಾಯಿತ ಮೊಬೈಲ್ ಸಂಖ್ಯೆ
ಇ-ಮೇಲ್ ಐಡಿ
ಎರಡು ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಜಾತಿ ಪ್ರಮಾಣಪತ್ರ
ಆದಾಯ ಪ್ರಮಾಣಪತ್ರ.
ಅಂಗವೈಕಲ್ಯ ಸ್ಥಿತಿ ಪ್ರಮಾಣಪತ್ರ (ಅನ್ವಯಿಸಿದರೆ)
NMMS ವಿದ್ಯಾರ್ಥಿವೇತನಕ್ಕೆ ಆಯ್ಕೆ ವಿಧಾನ:
✓ ಮಾನಸಿಕ ಸಾಮರ್ಥ್ಯ ಪರೀಕ್ಷೆ (MAT); 90 ಬಹುಆಯ್ಕೆ ಪ್ರಶ್ನೆಗಳಿರುತ್ತವೆ. ಪ್ರತಿ ಪ್ರಶ್ನೆಗೂ ಒಂದು ಅಂಕದಂತೆ 90 ಅಂಕಗಳನ್ನು ನಿಗದಿ. ಈ ಪ್ರಶ್ನೆಪತ್ರಿಕೆಯು ವಿದ್ಯಾರ್ಥಿಗಳು ಕಾರಣ ನೀಡುವ, ವಿಶ್ಲೇಷಿಸುವ, ಸಂಶ್ಲೇಷಿಸುವ ಇತ್ಯಾದಿ ಸಾಮರ್ಥ್ಯಗಳನ್ನು ಅಳೆಯುವ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.
✓ ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (SAT); ಇದು ಕೂಡಾ 90 ಅಂಕಗಳಿಗೆ ಒಟ್ಟು 90 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿದೆ. ಅವುಗಳಲ್ಲಿ 35 ಪ್ರಶ್ನೆಗಳು ವಿಜ್ಞಾನ (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ), 35 ಪ್ರಶ್ನೆಗಳು ಸಮಾಜ ವಿಜ್ಞಾನ (ಇತಿಹಾಸ, ಭೂಗೋಳ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ) ಮತ್ತು 20 ಪ್ರಶ್ನೆಗಳು ಗಣಿತ ವಿಷಯಕ್ಕೆ ಸಂಬಂಧಿಸಿರುತ್ತವೆ.
ವಿದ್ಯಾರ್ಥಿ ವೇತನದ ಮೊತ್ತ:
ಪರೀಕ್ಷೆಯಲ್ಲಿ ಅರ್ಹತೆ ಪಡೆಯುವವರಿಗೆ 9ನೇ ತರಗತಿಯಿಂದ ಮಾಸಿಕ 1000 ರೂ.ಗಳಂತೆ ವರ್ಷಕ್ಕೆ 12,000ರೂ.ಗಳನ್ನು 4 ವರ್ಷಗಳವರೆಗೆ (ದ್ವಿತೀಯ ಪಿ.ಯು.ಸಿ ಯವರೆಗೆ) ವಿದ್ಯಾರ್ಥಿವೇತನವನ್ನು MoE DoSEL ವತಿಯಿಂದ ನೀಡಲಾಗುತ್ತದೆ.
ಪರೀಕ್ಷಾ ಶುಲ್ಕ:
ಸಾಮಾನ್ಯ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ – 20ರೂ.
ಪ.ಜಾ/ಪ.ಪಂ. ವಿದ್ಯಾರ್ಥಿಗಳಿಗೆ – 10ರೂ.
ಅರ್ಜಿ ಸಲ್ಲಿಸುವ ವಿಧಾನ(KSEAB NMMS Examination 2025-26):
ಗಮನಿಸಿ: ಅರ್ಜಿ ಸಲ್ಲಿಸಲು ಸ್ವಯಂ ನೋಂದಣಿಗೆ ಅವಕಾಶವಿರುವುದಿಲ್ಲ. ಪೋಷಕರು ತಮ್ಮ ಮಗ/ಮಗಳು ಓದುತ್ತಿರುವ ಶಾಲೆಗೆ ನಿಗದಿತ ದಾಖಲೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
—————- ಶಾಲಾ ಮುಖ್ಯಶಿಕ್ಷಕರು/ ಪ್ರಾಂಶುಪಾಲರ ಗಮನಕ್ಕೆ———————–
• ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವೆಬ್ ಸೈಟ್ https://kseeb.karnataka.gov.inನ NMMSನಲ್ಲಿ ಶಾಲೆಯ U-DISE ಕೋಡ್ ಬಳಸಿ Login ಆಗಿ.
Kseab Nmms Exam Online Application Form 2025-26
• ಸಂಬಂಧಿಸಿದ ಶಾಲಾ ಮುಖ್ಯಶಿಕ್ಷಕರು/ ಪ್ರಾಂಶುಪಾಲರೇ ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು Online ಮೂಲಕ ಭರ್ತಿ ಮಾಡಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.