ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ

Published on:

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -01ರ ಫಲಿತಾಂಶವನ್ನು ಅಧಿಕೃತವಾಗಿ ಇಂದು ಪ್ರಕಟಿಸಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ -01ಅನ್ನು ಮಾರ್ಚ್ 18ರಿಂದ ಏಪ್ರಿಲ್ 02 ರವರೆಗೆ ಕರ್ನಾಟಕದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು, ಇದೀಗ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಪ್ರೆಸ್‌ ಮೀಟ್‌ನಲ್ಲಿ SSLC-01ರ ಫಲಿತಾಂಶವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು KSEAB ಅಧಿಕೃತ ಜಾಲತಾಣ https://karresults.nic.in/ ಕ್ಕೆ ಭೇಟಿ ನೀಡಿ ಫಲಿತಾಂಶವನ್ನು ಪರಿಶೀಲಿಸಬಹುದು.

ಎಸ್.ಎಸ್.ಎಲ್.ಸಿ-ಪರೀಕ್ಷೆ 1ರ ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ ?

• ಮೊದಲಿಗೆ ಅಭ್ಯರ್ಥಿಗಳು KSEAB ಅಧಿಕೃತ ಜಾಲತಾಣ https://karresults.nic.in/ ಕ್ಕೆ ಭೇಟಿ ನೀಡಿ.

• ಬಳಿಕ ಇತ್ತೀಚಿನ ಸುದ್ದಿಗಳು ವಿಭಾಗದಲ್ಲಿ ನೀಡಲಾಗಿರುವ “ಎಸ್.ಎಸ್.ಎಲ್.ಸಿ. 2026 ಪರೀಕ್ಷೆ – 1 ರ ಫಲಿತಾಂಶ ಪ್ರಕಟಣೆ / SSLC 2026 ಪರೀಕ್ಷೆ -1 ಫಲಿತಾಂಶವನ್ನು 23/04/2026 ರಂದು ಪ್ರಕಟಿಸಲಾಗಿದೆ” ಲಿಂಕ್ ಮೇಲೆ ಕ್ಲಿಕ್ ಮಾಡಿ.

• ನಂತರ ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಸಲ್ಲಿಸಿ.

• ಈಗ ನಿಮ್ಮ ಎಸ್.ಎಸ್.ಎಲ್.ಸಿ- ಪರೀಕ್ಷೆ-01ರ ಫಲಿತಾಂಶ ಕಾಣಸಿಗುತ್ತದೆ.

• ಭವಿಷ್ಯದ ಉಲ್ಲೇಖಕ್ಕಾಗಿ ಫಲಿತಾಂಶದ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

• ಅಥವಾ KarnatakaOne Mobile App ಮೂಲಕವೂ ಫಲಿತಾಂಶವನ್ನು ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು.

ಅಂಕಪಟ್ಟಿ ಡಿಜಿ ಲಾಕರ್ ನಲ್ಲಿ ಲಭ್ಯ!

ವಿದ್ಯಾರ್ಥಿಗಳು ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ ಆಪ್ https://www.digilocker.gov.in/ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು.

Important Direct Links:

KSEAB SSLC Exam 1 Result 2026 Check LinkCheck Now
More UpdatesKarnatakahelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment