ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಡಿಸೆಂಬರ್-2025ರ ಮಾಹೆಯಲ್ಲಿ ನಡೆಯಲಿರುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕ(ಪರೀಕ್ಷೆ) ಹೆಚ್.ಎನ್.ಗೋಪಾಲಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳ ಅಭ್ಯರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ಆಸಕ್ತರು ಅರ್ಜಿಯನ್ನು ಸಮೀಪದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ. ಅ.15ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ರಾಜ್ಯದಲ್ಲಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲಾ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ SATS ಸಂಖ್ಯೆ ಲಭ್ಯವಿರುತ್ತದೆ ಆದ್ದರಿಂದ ಈ ಅಭ್ಯರ್ಥಿಗಳನ್ನು ರೆಗ್ಯುಲರ್ ಅಭ್ಯರ್ಥಿಗಳೆಂದು ಪರಿಗಣಿಸಲಾಗುವುದು. SATS ಸಂಖ್ಯೆ ಇಲ್ಲದ ಅಭ್ಯರ್ಥಿಗಳನ್ನು ಖಾಸಗಿ ಅಭ್ಯರ್ಥಿಗಳೆಂದು ಪರಿಗಣಿಸಲಾಗುವುದು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
• ಮಂಡಳಿ ಜಾಲತಾಣದ Center Login ಮೂಲಕ ಅಭ್ಯರ್ಥಿಗಳ ಮಾಹಿತಿ ಅಪ್ಲೋಡ್ ಮಾಡಲು ಪ್ರಾರಂಭಿಕ ದಿನಾಂಕ – ಸೆಪ್ಟೆಂಬರ್ 10, 2025
• ಮಂಡಳಿ ಜಾಲತಾಣದ Center Login ಮೂಲಕ ಅಭ್ಯರ್ಥಿಗಳ ಮಾಹಿತಿಯನ್ನು ಅಪ್ಲೋಡ್ ಮಾಡಲು ಕೊನೆ ದಿನಾಂಕ – ಅಕ್ಟೋಬರ್ 15, 2025
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
• ಡ್ರಾಯಿಂಗ್ ಗ್ರೇಡ್ ಪರೀಕ್ಷೆ ತೆಗೆದುಕೊಳ್ಳಲು ರೆಗ್ಯುಲರ್ ಹಾಗೂ ಖಾಸಗಿ ಅಭ್ಯರ್ಥಿಗಳು 7ನೇ ತರಗತಿ ಉತ್ತೀರ್ಣರಾಗಿರಬೇಕು.
• ಪ್ರಸ್ತುತ 8, 9, 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ SATS ಸಂಖ್ಯೆ ಹೊಂದಿರುವವರು ಶಾಲೆಯ ದಾಖಲಾತಿ ವಹಿಯ ಪ್ರಕಾರ ಸಾಟ್ಸ್ನಲ್ಲಿ ಅಪ್ಡೇಟ್ ಮಾಡಿಸಿ ಪರೀಕ್ಷೆ ತೆಗೆದುಕೊಳ್ಳಬಹುದು.
• ಖಾಸಗಿ ಅಭ್ಯರ್ಥಿಗಳು ಸಹ ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿದೆ.
• ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಲೋಯರ್ ಮತ್ತು ಹೈಯರ್ ಎಂಬ ಎರಡು ಪರೀಕ್ಷೆಗಳಿರುತ್ತವೆ. ಅಭ್ಯರ್ಥಿಗಳು ಲೋಯರ್ ಗ್ರೇಡ್ ಪರೀಕ್ಷೆ ತೆಗೆದುಕೊಳ್ಳದೆಯೇ ನೇರವಾಗಿ ಹೈಯರ್ ಗ್ರೇಡ್ ಪರೀಕ್ಷೆ ತೆಗೆದುಕೊಳ್ಳಬಹುದು. ಆದರೆ ಎರಡೂ ಪರೀಕ್ಷೆಗಳನ್ನು ಏಕ ಕಾಲಕ್ಕೆ ತೆಗೆದುಕೊಳ್ಳಲು ಅವಕಾಶವಿಲ್ಲ.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:
ಸ್ಯಾಟ್ಸ್ ನಂಬರ್
ಆಧಾರ್ ಕಾರ್ಡ್
ಮೊಬೈಲ್ ಸಂಖ್ಯೆ(ಆಧಾರ್ ಜೋಡಣೆ ಇರುವ)
ಇ-ಮೇಲ್ ಐಡಿ
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣ ಪತ್ರ
ಅಂಗವೈಕಲ್ಯ ಸ್ಥಿತಿ ಪ್ರಮಾಣಪತ್ರ (ಅನ್ವಯಿಸಿದರೆ)
ಈ ದಾಖಲೆಗಳನ್ನು ಹೊರತುಪಡಿಸಿ ಇತರೆ ದಾಖಲೆಗಳೂ ಇರಬಹುದು.
ಪರೀಕ್ಷಾ ಶುಲ್ಕದ ವಿವರ:
✓ ಡ್ರಾಯಿಂಗ್ ಗ್ರೇಡ್ ಲೋಯರ್ ಪರೀಕ್ಷೆಗೆ;
ಪ.ಜಾ/ಪ.ಪಂ. ಅಭ್ಯರ್ಥಿಗಳಿಗೆ – 20ರೂ.
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ – 280ರೂ.
✓ ಡ್ರಾಯಿಂಗ್ ಗ್ರೇಡ್ ಹೈಯರ್ ಪರೀಕ್ಷೆಗೆ;
ಪ.ಜಾ/ಪ.ಪಂ. ವಿದ್ಯಾರ್ಥಿಗಳಿಗೆ – 20ರೂ.
ಉಳಿದ ಎಲ್ಲಾ ವಿದ್ಯಾರ್ಥಿಗಳಿಗೆ – 280ರೂ.
ಅರ್ಜಿ ಸಲ್ಲಿಸುವ ವಿಧಾನ:
ನಿಗದಿತ ದಾಖಲಾತಿಗಳನ್ನು ತೆಗೆದುಕೊಂಡು ಮಂಡಳಿಯು ನಿಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಅನುಮೋದಿಸಿದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು..
ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಡಿಸೆಂಬರ್-2025ರ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಹಾಜರಾಗುವ ಖಾಸಗಿ ಹಾಗೂ ರೆಗ್ಯುಲರ್ ಅಭ್ಯರ್ಥಿಗಳ ನೋಂದಣಿ, ಮಾಹಿತಿಯನ್ನು ಮಂಡಳಿಯ ಜಾಲತಾಣದ Center Login(https://kseeb.karnataka.gov.in/DrawingOnlineApplication/loginpage.aspx) ಮುಖಾಂತರ ಅಪ್ಲೋಡ್ ಮಾಡುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.