KSET 2024 Documents Verification Time Table: ಅರ್ಹ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆಗೆ‌ ಮತ್ತೊಮ್ಮೆ ಅವಕಾಶ!

Published on:

ಫಾಲೋ ಮಾಡಿ
KSET 2024 Documents Verification
KSET 2024 Documents Verification

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (KSET-2023)ಕ್ಕೆ ಸಂಬಂಧಿಸಿದಂತೆ ಪ್ರಕಟಿಸಲಾಗಿದ್ದ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪಟ್ಟಿ ಆಧರಿಸಿ ದಾಖಲೆಗಳ ಪರಿಶೀಲನೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ದಾಖಲಾತಿ ಪರಿಶೀಲನೆಗೆ ಹಾಜರಾಗ ಬೇಕಿರುವ ಅಭ್ಯರ್ಥಿಗಳ ಕ್ರಮ ಸಂಖ್ಯೆಯನ್ನು ಮತ್ತು ನಿಗದಿತ ದಿನಾಂಕವನ್ನು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಅಯ್ಕೆಯಾದ‌ ಅಭ್ಯರ್ಥಿಗಳ‌ ದಾಖಲೆಗಳ ಪರಿಶೀಲನೆಯನ್ನು‌ ಜುಲೈ 11 ರಿಂದ 31 ರವರೆಗೆ ನಡೆದ ದಾಖಲಾತಿ ಪರಿಶೀಲನೆಯಲ್ಲಿ ಕಾರಣಾಂತರಗಳಿಂದ ಹಾಜರಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು. ದಾಖಲಾತಿ ಪರಿಶೀಲನೆಗೆ ಹಾಜರಾಗದ ಅಭ್ಯರ್ಥಿಗಳು ಆಗಸ್ಟ್ 17 ರಂದು ಹಾಜರಾಗಲು ಇಲಾಖೆಯು ತಿಳಿಸಿದೆ.  ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ದಾಖಲಾತಿ ಪರಿಶೀಲನೆಗಳನ್ನು ನಡೆಸಲಾಗುತ್ತದೆ. ಅಭ್ಯರ್ಥಿಗಳ ಮಾಹಿತಿಗಾಗಿ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿ,‌ ಉತ್ತರಗಳ ಮೇಲೆ ಆಕ್ಷೇಪಣೆ ‌ಸಲ್ಲಿಸಲು ಅವಕಾಶ ನೀಡಲಾಗಿತ್ತು. ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಕೀ ಉತ್ತರಗಳನ್ನು ಮತ್ತು ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಕಟ್ ಆಫ್ ಅಂಕಗಳನ್ನು ಮೇ 2 ರಂದು ಪ್ರಕಟಿಸಲಾಗಿತ್ತು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment