ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025ರ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(KSET)ನಡೆಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ರಾಜ್ಯದ ವಿಶ್ವವಿದ್ಯಾನಿಲಯ, ಪ್ರಥಮ ದರ್ಜೆ ಪದವಿ ಕಾಲೇಜು, ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹತೆಯನ್ನು ಪಡೆಯಲು ಕೆಸೆಟ್ ಪರೀಕ್ಷೆಯನ್ನು ಪ್ರತಿ ವರ್ಷ ನಡೆಸಲಾಗುತ್ತದೆ. ಪ್ರಸ್ತುತ ಈ ಬಾರಿಯ ಕೆಸೆಟ್-2025ರ ಪರೀಕ್ಷೆಯನ್ನು 33 ವಿಷಯಗಳಲ್ಲಿ ನಡೆಸಲಾಗುತ್ತಿದ್ದು, ಪ್ರಾಧಿಕಾರವು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣ ಗೆ ಭೇಟಿ ನೀಡುವ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಆಗಸ್ಟ್ 28, 2025
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ – ಸೆಪ್ಟೆಂಬರ್ 18, 2025
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 19, 2025
- ಪ್ರವೇಶ ಪತ್ರ (Hall Ticket) ಬಿಡುಗಡೆ ದಿನಾಂಕ – ಅಕ್ಟೋಬರ್ 24, 2025
- ಪರೀಕ್ಷಾ ದಿನಾಂಕ – ನವೆಂಬರ್ 02, 2025
ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಹತೆ ಹಾಗೂ ಸಾಮಾನ್ಯ ಅರ್ಹತೆಗಳು
• ಅಭ್ಯರ್ಥಿಗಳು ಯು.ಜಿ.ಸಿ ಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯ / ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
• ಪರೀಕ್ಷೆಯಲ್ಲಿ (ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇ.55% ರಷ್ಟು ,ಪ.ಜಾತಿ, ಪ.ಪಂಗಡ, ಇತರ ಹಿಂದುಳಿದ ಅಭ್ಯರ್ಥಿಗಳು (ಪ್ರವರ್ಗ-I, IIA, IIB, IIIA, IIIB), ಪಿಡಬ್ಲ್ಯೂಡಿ ಮತ್ತು ತೃತೀಯ ಲಿಂಗ ಗುಂಪಿಗೆ ಸೇರಿದ ಅಭ್ಯರ್ಥಿಗಳು ಶೇ.50% ರಷ್ಟು ಅಂಕಗಳನ್ನು ಪಡೆದಿರಬೇಕು.
• ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ (ಪ್ರಥಮ ಮತ್ತು ದ್ವಿತೀಯ) ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕೆಸೆಟ್ ಪರೀಕ್ಷೆ ಬರೆಯಲು ತಾತ್ಕಾಲಿಕವಾಗಿ ಪ್ರವೇಶ ನೀಡಲಾಗುತ್ತದೆ.
• ಪರೀಕ್ಷೆಯಲ್ಲಿ (ಸಾಮಾನ್ಯ ವರ್ಗದವರು ಶೇ.55% ರಷ್ಟು, ಪ.ಜಾತಿ, ಪ.ಪಂಗಡ, ಪ್ರವರ್ಗ-I, IIA, IIB, IIIA, ಮತ್ತು IIIB, ಪಿಡಬ್ಲ್ಯೂಡಿ ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳು, ಶೇ. 50% ರಷ್ಟು ಅಂಕ ಪಡೆದು, ಅರ್ಹತೆ ಹೊಂದಿ ಕೆಸೆಟ್ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ದಿನಾಂಕದಿಂದ ಎರಡು ವರ್ಷದೊಳಗಾಗಿ ಅವರ ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳನ್ನು ಸಲ್ಲಿಸಿದರೆ ಮಾತ್ರ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪ್ರಮಾಣ ಪತ್ರ ಪಡೆಯಬಹುದು.
• ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡಿದ ವಿಷಯದಲ್ಲಿಯೇ ಅಭ್ಯರ್ಥಿಗಳು ಕೆಸೆಟ್ (KSET) ಪರೀಕ್ಷೆಯನ್ನು ತೆಗೆದುಕೊಳ್ಳಬೇಕು.
• 1991ರ ಸೆಪ್ಟೆಂಬರ್ 19 ರೊಳಗೆ ಸ್ನಾತಕೋತ್ತರ ಪರೀಕ್ಷೆಯನ್ನು ಪೂರ್ಣಗೊಳಿಸಿ ( ಫಲಿತಾಂಶ ದಿನಾಂಕವನ್ನು ಲೆಕ್ಕಿಸದೆ) ಹಾಗೂ ಪಿ.ಹೆಚ್.ಡಿ ಪದವಿ ಪಡೆದವರು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಒಟ್ಟು ಅಂಕಗಳಲ್ಲಿ 5% ವಿನಾಯಿತಿ ಇರುತ್ತದೆ. (55%ರ ಬದಲಾಗಿ 50%).ರಷ್ಟು ಅಂಕಗಳನ್ನು ಪಡೆದಿರಬೇಕು.
ವಯೋಮಿತಿ:
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 ತೆಗೆದುಕೊಳ್ಳಲು ಅಭ್ಯರ್ಥಿಗಳಿಗೆ ಯಾವುದೇ ಗರಿಷ್ಟ ವಯೋಮಿತಿ ಇರುವುದಿಲ್ಲ.
ಪರೀಕ್ಷಾ ದಿನಾಂಕ:
ನವೆಂಬರ್ 2ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ 11 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 33 ವಿಷಯಗಳಿಗೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 ಅನ್ನು ನಡೆಸಲಾಗುತ್ತದೆ.
ಪ್ರಶ್ನೆಪತ್ರಿಕೆಯ ವಿವರ:
• ಪತ್ರಿಕೆ – I: ಸಾಮಾನ್ಯ ಪತ್ರಿಕೆ – ಈ ಪತ್ರಿಕೆಯು ಅಭ್ಯರ್ಥಿಗಳ ಸಾಮಾನ್ಯ ಪತ್ರಿಕೆಯಾಗಿದ್ದು, ಸಾಮಾನ್ಯ ಜ್ಞಾನ, ಬೋಧನೆ ಹಾಗೂ ಸಂಶೋಧನೆಯ ಅಭಿರುಚಿಗೆ ಸಂಬಂಧಿಸಿರುತ್ತದೆ. ಅಭ್ಯರ್ಥಿಗಳ ಸಾಮಾನ್ಯ ತಿಳಿವಳಿಕೆಗಳನ್ನು ಗ್ರಹಿಸುವ ಹಾಗೂ ಯೋಚನಾ ಸಾಮರ್ಥ್ಯವನ್ನು ಅಳೆಯುವಂತಹದ್ದಾಗಿರುತ್ತದೆ. ಈ ಪತ್ರಿಕೆಯು 50 ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪ್ರಶ್ನೆಗೆ 2 ಅಂಕಗಳಿರುತ್ತದೆ.
• ಪತ್ರಿಕೆ – II: ವಿಷಯ ಪತ್ರಿಕೆ – ಈ ಪತ್ರಿಕೆಯು ಅಭ್ಯರ್ಥಿಯ ಆಯ್ಕೆ ಮಾಡಿದ ವಿಷಯದ್ದಾಗಿರುತ್ತದೆ. ಈ ಪತ್ರಿಕೆಯು ಆಯ್ಕೆ ಮಾಡಿದ ವಿಷಯಗಳಲ್ಲಿ 100 ಕಡ್ಡಾಯ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪ್ರಶ್ನೆಗೂ 2 ಅಂಕಗಳಿರುತ್ತದೆ. ಗರಿಷ್ಠ 200 ಅಂಕಗಳಿರುತ್ತವೆ.
ಅರ್ಹತೆ ಪಡೆಯಲು ಗಳಿಸಬೇಕಾದ ಕನಿಷ್ಠ ಅಂಕಗಳು ಹಾಗೂ ಆಯ್ಕೆ ವಿಧಾನ
• ಸಹಾಯಕ ಪ್ರಾಧ್ಯಾಪಕರ ಅರ್ಹತೆಗೆ ಪರಿಗಣಿಸಬೇಕಾದರೆ, ಪತ್ರಿಕೆ – 1 ಮತ್ತು ಪತ್ರಿಕೆ – II ರಲ್ಲೂ ಹಾಜರಾಗಿ, GM ಅಭ್ಯರ್ಥಿಗಳು ಎರಡೂ ಪತ್ರಿಕೆಗಳೂ ಸೇರಿ ಒಟ್ಟು ಶೇ.40 ಅಂಕಗಳು ಮತ್ತು ಮೀಸಲಾತಿ ವ್ಯಾಪ್ತಿಗೆ ಬರುವ ಪ.ಜಾ, ಪ.ಪಂ, ಇತರೆ ಹಿಂದುಗಳಿದ ವರ್ಗ, ತೃತೀಯ ಲಿಂಗದ ಮತ್ತು ವಿಶೇಷಚೇತನ ಅಭ್ಯರ್ಥಿಗಳು ಎರಡೂ ಪತ್ರಿಕೆಗಳಲ್ಲೂ ಸೇರಿ ಶೇ.35 ಅಂಕಗಳನ್ನು ಗಳಿಸಿರಬೇಕು.
• ಅಂತಹ ಅಭ್ಯರ್ಥಿಗಳನ್ನು ಮಾತ್ರ ಅರ್ಹತಾ ಪಟ್ಟಿಗೆ ಪರಿಗಣಿಸಲಾಗುವುದು, ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ವರ್ಗವಾರು, ವಿಷಯವಾರು ಮೆರಿಟ್ ಪಟ್ಟಿಯನ್ನು ತಯಾರಿಸಲಾಗುವುದು.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗ, ಪ್ರವರ್ಗ, II-A, II-B, IIІ-А, ІІІ-В ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ – 1000ರೂ.
• ಪ್ರವರ್ಗ-I, ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ – 700ರೂ.
How to Apply for KSET 2025
ಅರ್ಜಿ ಸಲ್ಲಿಸುವ ವಿಧಾನ;
- ಅಭ್ಯರ್ಥಿಗಳು ಮೊದಲು ಸಂಪೂರ್ಣ ಅಧಿಸೂಚನೆಯನ್ನು ಓದಬೇಕು.
- ಕೆ ಇ ಎ ಅಧಿಕೃತ https://cetonline.karnataka.gov.in/kea/ ಜಾಲತಾಣಕ್ಕೆ ಭೇಟಿ ನೀಡಿ.
- ಮುಖಪುಟದಲ್ಲಿ “ಪ್ರವೇಶ ವಿಭಾಗ” ಆಯ್ಕೆ ಮಾಡಿ.
- ನಂತರ “ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್)-2025 – ಅರ್ಜಿ ನಮೂನೆ” ಆಯ್ಕೆ ಮಾಡಿ.
- ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
- ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಬಳಕೆಗಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ
Important Direct Links:
KSET 2025 Notification PDF | Download |
KSET 2025 Application Form Link | Apply Now |
Official Website | kea.kar.nic.in |
More Updates | KarnatakaHelp.in |