ಕೆಸೆಟ್‌ 2025ರ ಮೂಲ ದಾಖಲಾತಿ ಪರಿಶೀಲನೆ ವೇಳಾಪಟ್ಟಿ ಬಿಡುಗಡೆ

Published on:

ಫಾಲೋ ಮಾಡಿ
KSET 2025 Document Verification Schedule
KSET Document Verification Schedule 2025

ಕರ್ನಾಟಕ ಸಹಾಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2025ರಲ್ಲಿ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆಗಾಗಿ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ(ನ.27) ಬಿಡುಗಡೆ ಮಾಡಿದೆ.

ನ.29 ರಿಂದ ಡಿ.06ರವರೆಗೆ ದಿನನಿತ್ಯ ಎರಡು ಪಾಳೆಯಲ್ಲಿ ದಾಖಲಾತಿ ಪರಿಶೀಲನೆ ನಡೆಯಲಿದ್ದು, ವಿಷಯವಾರು ಪಟ್ಟಿಯಲ್ಲಿರುವ ಅನುಕ್ರಮ ಸಂಖ್ಯೆಯನ್ನು ಆಧರಿಸಿ ನಿಗದಿತ ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಲು ಅಭ್ಯರ್ಥಿಗಳಿಗೆ ಪ್ರಾಧಿಕಾರ ಹೊರಡಿಸಿದ ಪ್ರಕಟಣೆ ತಿಳಿಸಿದೆ.

About the Author

ನಾನು 2021 ರಿಂದ ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ತೊಡಗಿಕೊಂಡಿರುವೆ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment