ಕೆಸೆಟ್‌ 2025ರ ಮೂಲ ದಾಖಲಾತಿ ಪರಿಶೀಲನೆ ವೇಳಾಪಟ್ಟಿ ಬಿಡುಗಡೆ

Published on:

ಕರ್ನಾಟಕ ಸಹಾಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2025ರಲ್ಲಿ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆಗಾಗಿ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ(ನ.27) ಬಿಡುಗಡೆ ಮಾಡಿದೆ.

ನ.29 ರಿಂದ ಡಿ.06ರವರೆಗೆ ದಿನನಿತ್ಯ ಎರಡು ಪಾಳೆಯಲ್ಲಿ ದಾಖಲಾತಿ ಪರಿಶೀಲನೆ ನಡೆಯಲಿದ್ದು, ವಿಷಯವಾರು ಪಟ್ಟಿಯಲ್ಲಿರುವ ಅನುಕ್ರಮ ಸಂಖ್ಯೆಯನ್ನು ಆಧರಿಸಿ ನಿಗದಿತ ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಲು ಅಭ್ಯರ್ಥಿಗಳಿಗೆ ಪ್ರಾಧಿಕಾರ ಹೊರಡಿಸಿದ ಪ್ರಕಟಣೆ ತಿಳಿಸಿದೆ.

ಸ್ನಾತಕೋತ್ತರ ಪದವಿ ಪೂರ್ಣಗೊಂಡಿರುವ ಎಲ್ಲಾ ವರ್ಷಗಳ/ಸೆಮಿಸ್ಟರ್‌ಗಳ ಅಂಕ ಪಟ್ಟಿಗಳನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಸದರಿ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗಿ. ಅರ್ಹತಾ ಪಟ್ಟಿಯಲ್ಲಿ ಹೆಸರಿದ್ದು ಆದರೆ ಸ್ನಾತಕೋತ್ತರ ಪದವಿ ಪೂರ್ಣಗೊಳ್ಳದ/ಎಲ್ಲಾ ವರ್ಷಗಳ/ಎಲ್ಲಾ ಸೆಮಿಸ್ಟರ್‌ಗಳ ಅಂಕ ಪಟ್ಟಿಗಳಿಲ್ಲದ ಅಭ್ಯರ್ಥಿಗಳು ಪರಿಶೀಲನೆಗೆ ಹಾಜರಾಗುವ ಅಗತ್ಯತೆ ಇರುವುದಿಲ್ಲ. ಅಂತಹ ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ಗೊತ್ತುಪಡಿಸಿದ ದಿನಾಂಕದಂದು ಹಾಜರಾಗಬಹುದು ಎಂದು ಕೆಇಎ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

ಪರಿಶೀಲನೆಗೆ ಕೊಂಡೊಯ್ಯ ಬೇಕಾದ ದಾಖಲೆಗಳು

  • ಪರೀಕ್ಷೆಯ ಪ್ರವೇಶ ಪತ್ರ
  • ಆಧಾರ್‌ ಕಾರ್ಡ್‌
  • ಸ್ನಾತ್ತಕೋತ್ತರ ಪದವಿಯ ಎಲ್ಲಾ ಸೆಮಿಸ್ಟರ್‌ ಅಂಕಪಟ್ಟಿ ಜೊತೆಗೆ ಪಾಸಿಂಗ್‌ ಸರ್ಟಿಫಿಕೇಟ್‌
  • ಪಿ.ಎಚ್‌ಡಿ ಪದವಿ ಪ್ರಮಾಣ ಪತ್ರ (19/9/1991 ರ ಮೊದಲು ಪಡೆದಿದ್ದರೆ ಮಾತ್ರ ಅನ್ವಯ)
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ ( ಆನ್‌ಲೈನ್‌ ಅರ್ಜಿಯಲ್ಲಿ ಮೀಸಲಾತಿ ಕೋರಿದ್ದಲ್ಲಿ ಮಾತ್ರ ಅನ್ವಯ)
    • ಹಾಗೂ ಇತರೆ ದಾಖಲೆಗಳೂ…..

KSET 2025ರ ದಾಖಲಾತಿ ಪರಿಶೀಲನೆಯ ವೇಳಾಪಟ್ಟಿ

Kset 2025 Document Verification Full Schedule
Kset 2025 Document Verification Full Schedule

Important Direct Links:

KSET 2025 Document Verification Schedule Notice PDFDownload
Official Websitehttps://cetonline.karnataka.gov.in/kea/
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

1 thought on “ಕೆಸೆಟ್‌ 2025ರ ಮೂಲ ದಾಖಲಾತಿ ಪರಿಶೀಲನೆ ವೇಳಾಪಟ್ಟಿ ಬಿಡುಗಡೆ”

Leave a Comment