ಕರ್ನಾಟಕ ರಾಜ್ಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025ರ ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು ಸೆ.24ಕ್ಕೆ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಭರಿಸಲು ಸೆ.25ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಅರ್ಜಿ ಸಲ್ಲಿಸಲು ಸೆ.18, ಅರ್ಜಿ ಶುಲ್ಕ ತುಂಬಲು ಸೆ.19 ನಿಗದಿಪಡಿಸಲಾಗಿತ್ತು. ಕೆಲವು ಅಭ್ಯರ್ಥಿಗಳು ಕೊನೆ ದಿನಾಂಕವನ್ನು ವಿಸ್ತರಿಸುವಂತೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರು. ಆದ್ದರಿಂದ ಕೊನೆ ಅವಕಾಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.