ಕೆಸೆಟ್‌-2025 ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ

Published on:

ಕರ್ನಾಟಕ ರಾಜ್ಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025ರ ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು ಸೆ.24ಕ್ಕೆ ಹಾಗೂ ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಭರಿಸಲು ಸೆ.25ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಅರ್ಜಿ ಸಲ್ಲಿಸಲು ಸೆ.18, ಅರ್ಜಿ ಶುಲ್ಕ ತುಂಬಲು ಸೆ.19 ನಿಗದಿಪಡಿಸಲಾಗಿತ್ತು. ಕೆಲವು ಅಭ್ಯರ್ಥಿಗಳು ಕೊನೆ ದಿನಾಂಕವನ್ನು ವಿಸ್ತರಿಸುವಂತೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರು. ಆದ್ದರಿಂದ ಕೊನೆ ಅವಕಾಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ: ಕೆಸೆಟ್ 2025: ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ, ಅರ್ಜಿ ಸಲ್ಲಿಸುವ ವಿಧಾನ ಹೇಗೆ?

Important Direct Links:

KSET 2025 Last Date Extended Notice PDFDownload
Official Websitehttps://cetonline.karnataka.gov.in/kea/
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

2 thoughts on “ಕೆಸೆಟ್‌-2025 ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ”

Leave a Comment