ಕೆಸೆಟ್ ಪರೀಕ್ಷೆ ನ.02ಕ್ಕೆ | ನೋಂದಣಿ ಸೆ.1ರಿಂದ ಪ್ರಾರಂಭ

Published on:

Updated On:

ಪ್ರಸಕ್ತ ವರ್ಷದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್-2025)ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಅಧಿಸೂಚನೆ ತಿಳಿಸಿದ್ದಾರೆ.

ಒಟ್ಟು 33 ವಿಷಯಗಳನೊಳಗೊಂಡ ಕೆಸೆಟ್‌ ಪರೀಕ್ಷೆಯು ನ.02 (ಭಾನುವಾರ)ರಂದು ನಡೆಯಲಿದೆ. ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಪಡೆದಿರುವವರು ಅಥವಾ ಪ್ರಸ್ತುತ ವರ್ಷದಲ್ಲಿ ಪ್ರಥಮ/ದ್ವಿತೀಯ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು https://cetonline.karnataka.gov.in/kea/ನ ಮೂಲಕ ಸೆ.24ರೊಳಗೆ ಸಲ್ಲಿಸಬಹುದು.

ಸಾಮಾನ್ಯ ವರ್ಗ, ಪ್ರವರ್ಗ 2-ಎ, 2-ಬಿ, 3-ಎ, 3-ಬಿ ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ 1,000/- ರೂ. ಹಾಗೂ ಪ್ರವರ್ಗ-I, ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ 700/- ರೂ. ಅರ್ಜಿ ಶುಲ್ಕ ಭರಿಸಬೇಕು ಎಂದು ಅಧಿಸೂಚನೆಯಲ್ಲಿ ಅವರು ಮಾಹಿತಿ ನೀಡಿದ್ಧಾರೆ.

ಕೆಸೆಟ್-2025 ವೇಳಾಪಟ್ಟಿ ವಿವರ:

1) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಸೆಪ್ಟೆಂಬರ್‌ 01, 2025 (ಮುಂದೂಡಿಕೆ)
2) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ – 24.09.2025(ವಿಸ್ತರಣೆ)
3) ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – 25.09.2025(ವಿಸ್ತರಣೆ)
4) ಪ್ರವೇಶ ಪತ್ರ (Hall Ticket) ಬಿಡುಗಡೆ ದಿನಾಂಕ – 24.10.2025
5) ಪರೀಕ್ಷಾ ದಿನಾಂಕ – 02.11.2025

Important Direct Links:

KSET 2025 Notification PDFDownload
KSET 2025 Online Application Form LinkApply Now
Official Websitekea.kar.nic.in
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

3 thoughts on “ಕೆಸೆಟ್ ಪರೀಕ್ಷೆ ನ.02ಕ್ಕೆ | ನೋಂದಣಿ ಸೆ.1ರಿಂದ ಪ್ರಾರಂಭ”

Leave a Comment