ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಹತೆ ಪಡೆಯಲು ನ.2ರಂದು ನಡೆಸಲಾದ (ಕೆಸೆಟ್) ಅರ್ಹತಾ ಪರೀಕ್ಷೆ 2025ರ ತಾತ್ಕಾಲಿಕ ಕೀ ಉತ್ತರಗಳನ್ನು ಮಂಗಳವಾರ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.
ರಾಜ್ಯದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 34 ವಿಷಯಗಳಿಗೆ ಯಶಸ್ವಿಯಾಗಿ ನಡೆಸಲಾಗಿತ್ತು. ಇದೀಗ ಪ್ರಾಧಿಕಾರವು ಸದರಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು KEA ಅಧಿಕೃತ ಜಾಲತಾಣ https://cetonline.karnataka.gov.in/kea/ದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಈ ಸಂಬಂಧ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ನವೆಂಬರ್ 06ರೊಳಗೆ ಆನ್ ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶವನ್ನು ನೀಡಲಾಗಿದೆ.
• ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
• ಇತ್ತೀಚಿನ ಪ್ರಕಟಣೆಗಳು ವಿಭಾಗದಲ್ಲಿ ನೀಡಲಾಗಿರುವ “04-11-KSET- 2025 ತಾತ್ಕಾಲಿಕ ಕೀ ಉತ್ತರಗಳು.04/11/2025” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಕೆಸಿಇಟಿ ಪರೀಕ್ಷೆಯ ಉತ್ತರ ಕೀಲಿಯ ವಿಷಯವಾರು ಲಿಂಕ್ಗಳು ಪರದೆಯ ಮೇಲೆ ಕಾಣುತ್ತದೆ.
• ಅಭ್ಯರ್ಥಿಗಳು ಲಿಂಕ್ ಅನ್ನು ಕ್ಲಿಕ್ ಮಾಡಿದರೆ KSET ಉತ್ತರ ಕೀ ಪಿಡಿಎಫ್ ತೆರೆಯುತ್ತದೆ.
• ಡೌನ್ಲೋಡ್ ಮಾಡಿ ಮತ್ತು ನಿಮ್ಮ ಪ್ರತಿಕ್ರಿಯೆಗಳನ್ನು ಹೋಲಿಕೆ ಮಾಡಿ.
• ಸದರಿ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೆ ಅಭ್ಯರ್ಥಿಗಳು ಸಲ್ಲಿಸಬಹುದು.
ಆಕ್ಷೇಪಣೆ ಸಲ್ಲಿಸಲು ಅವಕಾಶ
• ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ https://cetonline.karnataka.gov.in/kea/ಗೆ ಭೇಟಿ ನೀಡಿ, 50ರೂ. ಆಕ್ಷೇಪಣೆ ಶುಲ್ಕ ಪಾವತಿಸಿ ಆಕ್ಷೇಪಣೆ ಸಲ್ಲಿಸಬಹುದು. ಅಭ್ಯರ್ಥಿಗಳು ಅಕ್ಷೇಪಣೆ ಸಲ್ಲಿಸುತ್ತಿರುವ ಪತ್ರಿಕೆಯ ವಿವರ, ವಿಷಯ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು.
• ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ, ಅಪೂರ್ಣ/ಆಧಾರರಹಿತವಾಗಿರುವ ಅಥವಾ ಶುಲ್ಕ ಪಾವತಿಸದೇ ಇರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳು ಆಕ್ಷೇಪಣೆಗಳನ್ನು ನವೆಂಬರ್ 06ರ ಸಂಜೆ 03 ಗಂಟೆಯೊಳಗೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ.
ಆಕ್ಷೇಪಣೆ ಸಲ್ಲಿಸುವ ವಿಧಾನ
• ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
• ನಂತರ ಇತ್ತೀಚಿನ ಪ್ರಕಟಣೆಗಳು ವಿಭಾಗದಲ್ಲಿ ನೀಡಲಾಗಿರುವ “04-11 KSET-2025 ತಾತ್ಕಾಲಿಕ ಕೀ ಉತ್ತರಗಳಿಗಾಗಿ ಆಕ್ಷೇಪಣೆ ಲಿಂಕ್.04-11-2025” ಮೇಲೆ ಕ್ಲಿಕ್ ಮಾಡಿ.
• ಅರ್ಜಿ ಸಂಖ್ಯೆ, ಅಭ್ಯರ್ಥಿಯ ಹೆಸರು, ಹುಟ್ಟಿದ ದಿನಾಂಕ ಹಾಗೂ ಪರೀಕ್ಷೆಯನ್ನು ಆಯ್ಕೆ ಮಾಡಿ ಲಾಗಿನ್ ಆಗಿ.
• ಆಕ್ಷೇಪಣೆಗಳನ್ನು ಸಲ್ಲಿಸುವಾಗ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಿ.
Good