KSET Result 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇತ್ತೀಚೆಗೆ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) 2024 ರ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಇಂದು (ಮೇ 2 ರಂದು) ಬಿಡುಗಡೆ ಮಾಡಲಾಗಿದೆ. ಪರೀಕ್ಷಾ ಪ್ರಾಧಿಕಾರವು ಈ ಹಿಂದೆ ಬಿಡುಗಡೆ ಮಾಡಿದ್ದ ತಾತ್ಕಾಲಿಕ ಕೀ ಉತ್ತರಗಳ ವಿರುದ್ಧ ಅಭ್ಯರ್ಥಿಗಳು ಎತ್ತಿರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ಅಂತಿಮ ಫಲಿತಾಂಶವನ್ನು ಸೂಕ್ಷ್ಮವಾಗಿ ಸಿದ್ಧಪಡಿಸಲಾಗಿದೆ.
KSET ಪರೀಕ್ಷೆಗೆ ಹಾಜರಾದ ಆಕಾಂಕ್ಷಿಗಳು ಈಗ ಅಧಿಕೃತ ವೆಬ್‌ಸೈಟ್ cetonline.karnataka.gov.in ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.
ಜನವರಿ 13 ರಂದು KSET ಪ್ರವೇಶ ಪರೀಕ್ಷೆ ನಡೆದಿದ್ದು, ಪರೀಕ್ಷೆಯು ಎರಡು ಗಂಟೆಗಳ ಕಾಲ ನಡೆಯಿತು. ಪೇಪರ್ 1 ಬೆಳಿಗ್ಗೆ 10 ರಿಂದ 11 ರವರೆಗೆ ಮತ್ತು ಪತ್ರಿಕೆ 2 ಮಧ್ಯಾಹ್ನ 12 ರಿಂದ ಮಧ್ಯಾಹ್ನ 2 ರವರೆಗೆ ನಡೆಸಲಾಯಿತು. ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರನ್ನು ನೇಮಿಸಿಕೊಳ್ಳಲು ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಅಂತಿಮ ಫಲಿತಾಂಶವನ್ನು ಪ್ರಕಟಣೆ ಮಾಡಲಾಗಿದ್ದು, ಅನ್ ಲೈನ್ ಮೂಲಕ ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.