ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ಸರ್ಕರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿ ತೇರ್ಗಡೆ ಹೊಂದಿರಬೇಕು. ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ನೌಕರಿಯನ್ನು ಹೊಂದಿರಬೇಕು. ಶೇಕಡಾವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ. ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣ https://powermedia.info/ಕ್ಕೆ ಭೇಟಿ ನೀಡಿ, ಮೇ 25 ರೊಳಗೆ ಸಲ್ಲಿಸಬಹುದು ಎಂದು ಸಂಘದ ರಾಜಾಧ್ಯಕ್ಷ ಸಿ ಎಸ್ ಷಡಾಕ್ಷರಿ ಅವರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
- ವಿದ್ಯಾರ್ಥಿಯ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
- ದೃಢೀಕೃತ ಅಂಕಪಟ್ಟಿ
- ಇಲಾಖೆಯ ಸೇವಾ ದೃಢೀಕರಣ ಪತ್ರ
- ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು/ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ(ಸಂಘದ ಅಧಿಕೃತ ಜಾಲದಲ್ಲಿ ಲಭ್ಯ)
ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ
ಹೆಚ್ಚಿನ ಮಾಹಿತಿಗಾಗಿ: ದೂರವಾಣಿ ಸಂಖ್ಯೆ 080-22354784/83ಗೆ ಬೆಳಿಗ್ಗೆ 10.30 ರಿಂದ ಸಂಜೆ 6.00ರೊಳಗೆ ಸಂಪರ್ಕಿಸಬಹುದು.
Important Direct Links:
| KSGEA Pratibha Puraskar 2026 Online Application Form Link (Direct Link) | Apply Now |
| KSGEA Pratibha Puraskar 2026 Certificate Form PDF | Download |
| Official Website | https://powermedia.info/ |
| More Updates | KarnatakaHelp.in |
Helpful
2025-26 pratiba purskar
applecation for swcholarship
Pratibapurskar application
Link is no longer accepting responses since morning, though last date to apply is 25.05.2026
By the evening of 24.05.2026 issue of not accepting responses from the link has been rectified and it is accepting applications even today. ( last day)
Free