KSGEA Pratibha Puraskar 2025: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published on:

2025ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಕೇಂದ್ರ ಸಂಘವು 2025ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚಿನ ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://ksgeanews.blogspot.com/2025/05/sslc-puc-2025.html
ಗೆ ಭೇಟಿ ನೀಡಿ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – 26-05-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31-05-2025

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:

*ವಿದ್ಯಾರ್ಥಿಯು 2025ರ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ 90% ಕ್ಕಿಂತ ಹೆಚ್ಚಿನ ಅಂಕ ಪಡೆದು ತೇರ್ಗಡೆಯಾಗಿರಬೇಕು.

  • ವಿದ್ಯಾರ್ಥಿಯ ತಂದೆ-ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ನೌಕರರಾಗಿರಬೇಕು.
  • ನಿಗಮದ ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

  • ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
  • ದೃಢೀಕೃತ ಅಂಕಪಟ್ಟಿ
  • ಇಲಾಖೆ ಸೇವಾ ದೃಢೀಕರಣ ಪತ್ರ ಹಾಗೂ ಸಂಘದ ಜಿಲ್ಲಾ/ ತಾಲ್ಲೂಕು/ ಯೋಜನಾ ಶಾಖೆಯ ಅಧ್ಯಕ್ಷರು / ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರಿಂದ ಪಡೆದ ದೃಢೀಕರಣ ಪತ್ರ. ( Ksgea news Blogspot ನಲ್ಲಿ PDF ಫೈಲ್ ಲಭ್ಯವಿದೆ).
  • ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Formatನಲ್ಲಿ (1 MBಮೀರದಂತೆ) ಅಪ್ಲೋಡ್ ಮಾಡುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಧಿಕೃತ ವೆಬ್ಸೈಟ್ https://ksgeanews.blogspot.com/2025/05/sslc-puc-2025.html ಗೆ ಭೇಟಿ ನೀಡಿ.
  • ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025 ವಿಭಾಗದ ಕೆಳಗೆ APPLY NOW ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿ ರವಾನೆಯಾಗಲಿದೆ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ವಿಶೇಷ ಸೂಚನೆ: ಶೇಕಡಾವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ: ಮೊ.ಸಂ: 9448208750 ಅಥವಾ ದೂ.ಸಂ:080-22354784/83 ಅನ್ನು ಸಂಪರ್ಕಿಸಬಹುದು.

Important Direct Links:

KSGEA Pratibha Puraskar Online Form 2025Apply Now
ಮತ್ತಷ್ಟು ಮಾಹಿತಿಗಾಗಿKarnataka Help.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

3 thoughts on “KSGEA Pratibha Puraskar 2025: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ”

Leave a Comment