ಕರ್ನಾಟಕ ರಾಜ್ಯ ಪೊಲೀಸ್ (KSP) ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (APC) ಖಾಲಿ ಇರುವ 3064 ಹುದ್ದೆಗಳಗೆ ಹುದ್ದೆಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು.ಪರೀಕ್ಷಾ ಪ್ರಾಧಿಕಾರವು ಜನವರಿ 28, 2024 ರಂದು ರಾಜ್ಯಾದ್ಯಂತ ಪರೀಕ್ಷೆಯನ್ನು ನಡಸಿ ಸಾವಿರಾರು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪವನ್ನು ನಡೆಸಿ ಅಂಕಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪರೀಕ್ಷೆಯ ಫಲಿತಾಂಶಗಳನ್ನು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ apc3064.ksp-recruitment.in ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.
ಸದರಿ ಲಿಖಿತ ಪರೀಕ್ಷೆಯನ್ನು ತೆಗೆದುಕೊಂಡಿರುವ ಎಲ್ಲಾ ಅಭ್ಯರ್ಥಿಗಳ ಅಂಕಗಳನ್ನು ಪೊಲೀಸ್ ಇಲಾಖೆಯ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದ್ದು, ಸದರಿ ಅಂಕಪಟ್ಟಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಯಾವುದಾದರೂ ಆಕ್ಷೇಪನಗಳಿದ್ದಲ್ಲಿ ಇ-ಮೇಲ್ ಮೂಲಕ ನೇಮಕಾತಿ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಪರೀಕ್ಷಾ ಪ್ರಾಧಿಕಾರವು 15 ಜೂನ್ 2024ರ ಸಂಜೆ 5:00 ವರೆಗೆ ಅಂಕಪಟ್ಟಿಯಲ್ಲಿನ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುತ್ತದೆ. apc3064@ksp-recruitment.in ಇ-ಮೇಲ್‌ಗೆ ಮಾತ್ರ ಸಲ್ಲಿಸುವುದು. ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಇಲಾಖೆ ಸ್ಪಷ್ಟನೆ ನೀಡಿದೆ..
KSP APC 3064 Examination Marks List PDF Link District Wise;