ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ (KSRLPS)ವು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.
ದಾವಣಗೆರೆ ಮತ್ತು ಬೆಂಗಳೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬ್ಲಾಕ್ ಮ್ಯಾನೇಜರ್(08), ಕ್ಲಸ್ಟರ್ ಮೇಲ್ವಿಚಾರಕ(08), ಜಿಲ್ಲಾ ವ್ಯವಸ್ಥಾಪಕ(02), ಜಿಲ್ಲಾ ಎಂಐಎಸ್ ಸಹಾಯಕ ಕಮ್ ಡಿಇಓ(01), ಕಚೇರಿ ಸಹಾಯಕ(01), ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ(03) ಸೇರಿದಂತೆ ಒಟ್ಟು 23 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿ.31ರೊಳಗೆ KSRLPS ಅಧಿಕೃತ ಜಾಲತಾಣ https://jobsksrlps.karnataka.gov.in/ ಕ್ಕೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ/ಸ್ನಾತ್ತಕೋತ್ತರ ಪದವಿ/ಪಿಜಿ ಡಿಪ್ಲೋಮಾ, ಸಂಬಂಧಿತ ವಿಷಯದಲ್ಲಿ ಬಿ.ಎಸ್ಸಿ/ಎಂ.ಎಸ್ಸಿ, ಎಂಬಿಎ/ಎಂ.ಕಾಂ ಪದವಿ ಪೂರ್ಣಗೊಳಿಸಿರಬೇಕು ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ ವೃತ್ತಿ ಅನುಭವವನ್ನು ಹೊಂದಿರಬೇಕು.
ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.
ವಯೋಮಿತಿ:
ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ KSRLPS ನಿಯಮಗಳ ಪ್ರಕಾರ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ ಮಾನದಂಡಗಳ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
• ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಧಿಕೃತ ವೆಬ್ ಸೈಟ್ https://jobsksrlps.karnataka.gov.in/ ಗೆ ಭೇಟಿ ನೀಡಿ.
• ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯ ಮೇಲೆ *ವೀಕ್ಷಿಸಿ/ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನಂತರ ಉದ್ಯೋಗದ ಅರ್ಹತೆ, ವೃತ್ತಿ ಅನುಭವ ಹಾಗೂ ಹಾಗೂ ಕೆಲಸದ ವಿವರವನ್ನು ಸಂಪೂರ್ಣವಾಗಿ ಓದಿ.
• ಬಳಿಕ ಹುದ್ದೆಗಳ ಅರ್ಹತೆಯನ್ನು ಪೂರ್ಣಗೊಳಿಸುತ್ತೇವೆ ಎಂದು ಖಚಿತಪಡಿಸಿಕೊಂಡು *ಈಗಲೇ ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಇಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಖಾತೆ ತೆರೆಯಿರಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ ನಮೂದಿಸಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Expect