ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನೆ ಸಂಸ್ಥೆ(ಕೆಎಸ್‌ಆರ್‌ಎಲ್‌ಪಿಎಸ್)ಯು ಯಾದಗಿರಿ ಜಿಲ್ಲೆಯ ಶೋರಾಪುರ ತಾಲೂಕಿನ ವ್ಯಾಪ್ತಿಗೆ ವಿವಿಧ ಬ್ಲಾಕ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮಾ.11 ಕೊನೆಯ ದಿನವಾಗಿದೆ.
ಒಟ್ಟು 03 ಸ್ಥಾನಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಕೆಎಸ್‌ಆರ್‌ಎಲ್‌ಪಿಎಸ್‌ನ ಉದ್ಯೋಗ ಅಧಿಕೃತ ಜಾಲತಾಣ https://jobsksrlps.karnataka.gov.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಫೆಬ್ರವರಿ 25, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮಾರ್ಚ್ 11, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕೃಷಿ ವಲಯದ ಬಿ.ಎಸ್.ಸಿ/ಎಂ.ಎಸ್.ಸಿ ಅಥವಾ ಕೃಷಿ ಜೀವನೋಪಾಯ ಅಥವಾ ಯಾವುದೇ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ 03 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
ಬ್ಲಾಕ್ ಮ್ಯಾನೇಜರ್ MIS/DEO/GPLF ಸಹಾಯಕ ಹುದ್ದೆಗೆ; ಯಾವುದೇ ಪದವಿ
ಬ್ಲಾಕ್ ಮ್ಯಾನೇಜರ್–ಕೃಷಿಯೇತರ ಜೀವನೋಪಾಯ; ಸ್ನಾತಕೋತ್ತರ ಪದವಿ
ಬ್ಲಾಕ್ ಮ್ಯಾನೇಜರ್-ಕೃಷಿ ಜೀವನೋಪಾಯ; ಬಿ.ಎಸ್ಸಿ+ ಸಂಬಂಧಿತ ಕ್ಷೇತ್ರದಲ್ಲಿ 01 ವರ್ಷದ ಅನುಭವ ಅಥವಾ ಎಂ.ಎಸ್ಸಿ+ ಸಂಬಂಧಿತ ಕ್ಷೇತ್ರದಲ್ಲಿ 03 ವರ್ಷದ ಅನುಭವ ಅಥವಾ ಯಾವುದೇ ಸ್ನಾತಕೋತ್ತರ ಪದವಿ ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ 05 ವರ್ಷದ ಅನುಭವ.
ವಯೋಮಿತಿ:
ಕನಿಷ್ಠ ಮಿತಿ – 18 ವರ್ಷಗಳು
ಗರಿಷ್ಠ ಮಿತಿ – 50 ವರ್ಷಗಳು
ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನೆ ಸಂಸ್ಥೆಯ ಮಾನದಂಡಗಳ ಅನುಸಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ₹17,050-25,000ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ
• ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಧಿಕೃತ ವೆಬ್ ಸೈಟ್ https://jobsksrlps.karnataka.gov.in/ಗೆ ಭೇಟಿ ನೀಡಿ.
• ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯ ಮೇಲೆ *ವೀಕ್ಷಿಸಿ/ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನಂತರ ಉದ್ಯೋಗದ ಅರ್ಹತೆ, ವೃತ್ತಿ ಅನುಭವ ಹಾಗೂ ಹಾಗೂ ಕೆಲಸದ ವಿವರವನ್ನು ಸಂಪೂರ್ಣವಾಗಿ ಓದಿ.
• ಬಳಿಕ ಹುದ್ದೆಗಳ ಅರ್ಹತೆಯನ್ನು ಪೂರ್ಣಗೊಳಿಸುತ್ತೇವೆ ಎಂದು ಖಚಿತಪಡಿಸಿಕೊಂಡು *ಈಗಲೇ ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಇಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಖಾತೆ ತೆರೆಯಿರಿ.
• ಮುಂದುವರೆದಂತೆ ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ ನಮೂದಿಸಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
| Official Notification and Online Form Link | View & Apply Now |
| Official Website | ksrlps.karnataka.gov.in |
| More Updates | KarnatakaHelp.in |
2nd puc science completed
Yes completed