ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ(KSRLPS)ದಲ್ಲಿ ನೌಕರಿ…

ಅರ್ಜಿ ಸಲ್ಲಿಕೆಗೆ ಜ.30ರ ಗಡುವು

Published on:

ಕೋಲಾರ: ಜಿಲ್ಲೆಯ ಮಾಲೂರು, ಕೋಲಾರ, ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ತಾಲೂಕುಗಳಲ್ಲಿ ವಿವಿಧ ಖಾಲಿ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ(KSRLPS) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕ್ಲಸ್ಟರ್ ಮೇಲ್ವಿಚಾರಕ(03), ಬ್ಲಾಕ್ ಮ್ಯಾನೇಜರ್(06), ಕಚೇರಿ ಸಹಾಯಕ(01) ಮತ್ತು ಜಿಲ್ಲಾ ವ್ಯವಸ್ಥಾಪಕ(01) ಸೇರಿದಂತೆ ಒಟ್ಟು 11 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತರು ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ, ಅರ್ಜಿ ಸಲ್ಲಿಸಲು ಜ.30ರೊಳಗೆ ಕೆಎಸ್‌ಆರ್‌ಎಲ್‌ಪಿಎಸ್‌ ಅಧಿಕೃತ ಜಾಲತಾಣ https://jobsksrlps.karnataka.gov.in/ಕ್ಕೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಜನವರಿ 15, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 30, 2026

ಶೈಕ್ಷಣಿಕ ಅರ್ಹತೆ:

✓ ಕ್ಲಸ್ಟರ್ ಮೇಲ್ವಿಚಾರಕ ಹಾಗೂ ಕಚೇರಿ ಸಹಾಯಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

✓ ಬ್ಲಾಕ್ ಮ್ಯಾನೇಜರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸ್ನಾತ್ತಕೋತ್ತರ ಪದವಿ/ಬಿ.ಎಸ್ಸಿ/ಎಂ.ಎಸ್ಸಿ/ಕೃಷಿ ಸಂಬಂಧಿತ ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು.

✓ ಜಿಲ್ಲಾ ವ್ಯವಸ್ಥಾಪಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಮಾಜ ವಿಜ್ಞಾನ/ಗ್ರಾಮೀಣಾಭಿವೃದ್ಧಿ/ಎಂ.ಬಿ.ಎ/ಎಂ.ಎಸ್.ಡಬ್ಲ್ಯೂ/ಕೃಷಿ ವಿಜ್ಞಾನ ಅಥವಾ ತತ್ಸಮಾನ ವಿಷಯದಲ್ಲಿ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

(ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ ವೃತ್ತಿ ಅನುಭವವನ್ನು ಹೊಂದಿರಬೇಕು ಹಾಗೂ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಓದುವುದು, ಬರೆಯುವುದು ಮತ್ತು ಮಾತನಾಡುವ ಕೌಶಲ್ಯದೊಂದಿಗೆ ಕಂಪ್ಯೂಟರ್‌ಗಳಲ್ಲಿ ಕೆಲಸ ಮಾಡುವ ಜ್ಞಾನವನ್ನು ಹೊಂದಿರಬೇಕು)

ವಯೋಮಿತಿ:

ಜಿಲ್ಲಾ ವ್ಯವಸ್ಥಾಪಕ ಹುದ್ದೆಗೆ; ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
ಉಳಿದ ಎಲ್ಲಾ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – KSRLPS ನಿಯಮಗಳ ಅನುಸಾರ

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ(KSRLPS) ನಿಯಮಗಳ ಪ್ರಕಾರ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ (KSRLPS) ಮಾನದಂಡಗಳ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ

• ಮೊದಲಿಗೆ ಅಭ್ಯರ್ಥಿಗಳು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಧಿಕೃತ ವೆಬ್ ಸೈಟ್ https://jobsksrlps.karnataka.gov.in/ಗೆ ಭೇಟಿ ನೀಡಿ.

• ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯ ಮೇಲೆ *ವೀಕ್ಷಿಸಿ/ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.

• ನಂತರ ಉದ್ಯೋಗದ ಅರ್ಹತೆ, ವೃತ್ತಿ ಅನುಭವ ಹಾಗೂ ಹಾಗೂ ಕೆಲಸದ ವಿವರವನ್ನು ಸಂಪೂರ್ಣವಾಗಿ ಓದಿ.

• ಬಳಿಕ ಹುದ್ದೆಗಳ ಅರ್ಹತೆಯನ್ನು ಪೂರ್ಣಗೊಳಿಸುತ್ತೇವೆ ಎಂದು ಖಚಿತಪಡಿಸಿಕೊಂಡು *ಈಗಲೇ ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.

• ಇಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಖಾತೆ ತೆರೆಯಿರಿ.

• ಮುಂದುವರೆದು ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ ನಮೂದಿಸಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Details and Application Form LinkView and Apply Now
Official Websiteksrlps.karnataka.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment