ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ(KSRLPS)ವು ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 22 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಜಿಲ್ಲೆಯ ಸಿಂಧಗಿ, ಬಸವನ ಬಾಗೇವಾಡಿ, ಮುದ್ದೇಬಿಹಾಳ ಹಾಗೂ ವಿಜಯಪುರ ತಾಲೂಕುಗಳಿಗೆ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ, ಜಿಲ್ಲಾ ವ್ಯವಸ್ಥಾಪಕ, ಕಚೇರಿ ಸಹಾಯಕ, ಬ್ಲಾಕ್ ಮ್ಯಾನೇಜರ್ ಹಾಗೂ ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಮಾ.05ರೊಳಗೆ ಕೆಎಸ್‌ಆರ್‌ಎಲ್‌ಪಿಎಸ್ ಅಧಿಕೃತ ಜಾಲತಾಣ https://jobsksrlps.karnataka.gov.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಫೆಬ್ರವರಿ 18, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮಾರ್ಚ್ 05, 2026
ಖಾಲಿ ಇರುವ ಹುದ್ದೆಗಳ ವಿವರ:
ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು – 02 ಹುದ್ದೆಗಳು
ಜಿಲ್ಲಾ ವ್ಯವಸ್ಥಾಪಕರು – 02 ಹುದ್ದೆಗಳು
ಕಚೇರಿ ಸಹಾಯಕರು – 01 ಹುದ್ದೆ
ಬ್ಲಾಕ್ ಮ್ಯಾನೇಜರ್ – 11 ಹುದ್ದೆಗಳು
ಕ್ಲಸ್ಟರ್ ಮೇಲ್ವಿಚಾರಕರು – 06 ಹುದ್ದೆಗಳು
ಒಟ್ಟು – 22 ಹುದ್ದೆಗಳು
ಶೈಕ್ಷಣಿಕ ಅರ್ಹತೆಯ ವಿವರ:
✓ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ/ಸ್ನಾತಕೋತ್ತರ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
✓ಜಿಲ್ಲಾ ವ್ಯವಸ್ಥಾಪಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿ.ಎಸ್.ಸಿ/ಎಂ.ಎಸ್.ಸಿ/ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ/ಸಮಾಜ ವಿಜ್ಞಾನ/ಗ್ರಾಮೀಣಾಭಿವೃದ್ಧಿ/ಎಂ.ಬಿ.ಎ/ಎಂ.ಎಸ್.ಡಬ್ಲ್ಯೂ/ಕೃಷಿ ವಿಜ್ಞಾನ ಅಥವಾ ತತ್ಸಮಾನ ವಿಷಯದಲ್ಲಿ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
✓ಕ್ಲಸ್ಟರ್ ಮೇಲ್ವಿಚಾರಕ ಹಾಗೂ ಕಚೇರಿ ಸಹಾಯಕ ಹುದ್ದೆಗಳಿಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
✓ಬ್ಲಾಕ್ ಮ್ಯಾನೇಜರ್ ಹುದ್ದೆಗಳಿಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ /ಸ್ನಾತ್ತಕೋತ್ತರ ಪದವಿ/ಬಿ.ಎಸ್.ಸಿ/ಎಂ.ಎಸ್.ಸಿ/ಕೃಷಿ ಸಂಬಂಧಿತ ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು. (ಅಭ್ಯರ್ಥಿಗಳು ಎಲ್ಲಾ ಹುದ್ದೆಗಳಿಗೂ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ ವೃತ್ತಿ ಅನುಭವವನ್ನು ಹೊಂದಿರಬೇಕು)
ವಯೋಮಿತಿ:
ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಹಾಗೂ ಜಿಲ್ಲಾ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
ಉಳಿದ ಎಲ್ಲಾ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – KSRLPS ನಿಯಮಗಳ ಅನುಸಾರ
ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ (KSRLPS) ಮಾನದಂಡಗಳ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂಬಳ:
ತಾಲೂಕು ವ್ಯವಸ್ಥಾಪಕ ಹುದ್ದೆಗಳಿಗೆ KSRLPS ನಿಯಮಗಳ ಅನುಸಾರ
ಜಿಲ್ಲಾ ವ್ಯವಸ್ಥಾಪಕ ಹುದ್ದೆಗಳಿಗೆ ₹30,000
ಕಚೇರಿ ಸಹಾಯಕ ಹುದ್ದೆಗಳಿಗೆ ₹20,000
ಬ್ಲಾಕ್ ಮ್ಯಾನೇಜರ್ ಹುದ್ದೆಗಳಿಗೆ ₹17,050-25,000
ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ₹18,000
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ.?
• ಅಭ್ಯರ್ಥಿಗಳು ಕೆಎಸ್‌ಆರ್‌ಎಲ್‌ಪಿಎಸ್ ಅಧಿಕೃತ ಜಾಲತಾಣ https://jobsksrlps.karnataka.gov.in/ ಕ್ಕೆ ಭೇಟಿ ನೀಡಿ.
• ಬಳಿಕ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯ ಶೀರ್ಷಿಕೆಯ ಕೆಳಗೆ ನೀಡಲಾಗಿರುವ *ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಇಮೇಲ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಖಾತೆ ತೆರೆಯಿರಿ.
• ಮುಂದುವರೆದು ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ ನಮೂದಿಸಿ, ಭಾವಚಿತ್ರ, ಸಹಿ, ಶೈಕ್ಷಣಿಕ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
| Official Details and Apply Link | View and Apply Now |
| Official Website | ksrlps.karnataka.gov.in |
| More Updates | KarnatakaHelp.in |
Give me job sir please
I am interested