ಬೆಂಗಳೂರು: ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ 2026-27 ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಸ್ವಾವಲಂಬಿ ಸಾರಥಿ (ಸರಕು ವಾಹನ/ಟ್ಯಾಕ್ಸಿ), ಫಾಸ್ಟ್ ಫುಡ್ ಟ್ರಕ್/ಟ್ರೈಲರ್, ಮೊಬೈಲ್ ಕಿಚನ್, ಫುಡ್ ಕಿಯೋಸ್, ಹೈನುಗಾರಿಕೆ ಹಾಗೂ ಇತರೆ ಉದ್ದೇಶಗಳು, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳು ಅಥವಾ ಅವರ ಅವಲಂಬಿತ ಕುಟುಂಬದವರು ಅರ್ಜಿ ಸಲ್ಲಿಸಬಹುದು.
ಅರ್ಜಿದಾರರ ವಯಸ್ಸು 21ರಿಂದ 50 ವರ್ಷ ವಯೋಮಾನದವರಾಗಿರಬೇಕು. ಅರ್ಹ ಫಲಾಪೇಕ್ಷಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಅಥವಾ ಗ್ರಾಮಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಮೂಲಕ ನ.30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
| ಸೇವಾಸಿಂಧು ಪೋರ್ಟಲ್ ಲಿಂಕ್ | https://sevasindhu.karnataka.gov.in |
| ಮತ್ತಷ್ಟು ಸುದ್ದಿಗಳಿಗಾಗಿ | ಕರ್ನಾಟಕಹೆಲ್ಪ್.ಇನ್ |