ಯಾದಗಿರಿ: 2025-26ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ(KSWDC)ದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು 2026ರ ಜನವರಿ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅವರು ತಿಳಿಸಿದ್ದಾರೆ.
ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಲಾಪೇಕ್ಷಿಗಳು ಸೌಲಭ್ಯ ಪಡೆಯಲು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/ ಮೂಲಕ ಅರ್ಜಿಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Jobs