ಯಾದಗಿರಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ(KSWDC)ದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಶಿರಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ ವಸತಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಅರ್ಜಿ ಸ್ವೀಕಾರ ಪ್ರಾರಂಭವಾಗಿದೆ. ಧನಶ್ರೀ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಗಳಡಿ ಅರ್ಜಿಗಳನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಎರಡರಲ್ಲೂ ಸಹ ಅರ್ಜಿಸಲ್ಲಿಸಲು ಅವಕಾಶ ನೀಡಲಾಗಿದೆ. ಅವಶ್ಯ ದಾಖಲಾತಿಗಳೊಂದಿಗೆ ಡಿ.15ರೊಳಗೆ ನಿಮಗೆ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.




Jobs
I am a student
Rani Avanti
Please tell us what type of job