ಬೀದರ: ಜಿಲ್ಲೆಯ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU) ದಲ್ಲಿ 2025-26ನೇ ಸಾಲಿಗೆ ವಿವಿಧ ಬೋಧನಾ ವೃಂದಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಸೇರಿದಂತೆ ಒಟ್ಟು 25 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನ.14 ರಿಂದ ನ.30ರವರೆಗೆ ಅವಕಾಶ ನೀಡಲಾಗಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KVAFSU ಅಧಿಕೃತ ವೆಬ್ ಸೈಟ್ https://tpvetjob.kvafsu.edu.in/svj/login/authನ ಮೂಲಕ ಅರ್ಜಿ ಸಲ್ಲಿಸಬಹುದು..
• ಪಶುವೈದ್ಯಕೀಯ ಅಂಗರಚನಾಶಾಸ್ತ್ರ – 01 ಹುದ್ದೆ • ಪಶುವೈದ್ಯಕೀಯ ಶರೀರಶಾಸ್ತ್ರ ಮತ್ತು ಜೀವರಸಾಯನಶಾಸ್ತ್ರ – 01 ಹುದ್ದೆ • ಜಾನುವಾರು ಉತ್ಪಾದನೆ ಮತ್ತು ನಿರ್ವಹಣೆ – 01 ಹುದ್ದೆ • ಜಾನುವಾರು ಸಾಕಣೆ ಸಂಕೀರ್ಣ – 01 ಹುದ್ದೆ • ಪಶುವೈದ್ಯಕೀಯ ಕ್ಲಿನಿಕಲ್ – 01 ಹುದ್ದೆ
✓ ಸಹ ಪ್ರಾಧ್ಯಾಪಕ ಹುದ್ದೆಗಳ ವಿವರ:
• ಪಶುವೈದ್ಯಕೀಯ ಅಂಗರಚನಾಶಾಸ್ತ್ರ – 01 ಹುದ್ದೆ • ಪಶುವೈದ್ಯಕೀಯ ಶರೀರಶಾಸ್ತ್ರ ಮತ್ತು ಜೀವರಸಾಯನಶಾಸ್ತ್ರ – 01 ಹುದ್ದೆ • ಜಾನುವಾರು ಉತ್ಪಾದನೆ ಮತ್ತು ನಿರ್ವಹಣೆ – 01 ಹುದ್ದೆ • ಜಾನುವಾರು ಸಾಕಣೆ ಸಂಕೀರ್ಣ – 01 ಹುದ್ದೆ • ಪಶುವೈದ್ಯಕೀಯ ಕ್ಲಿನಿಕಲ್ – 01 ಹುದ್ದೆ
✓ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ವಿವರ:
• ಪಶುವೈದ್ಯಕೀಯ ಅಂಗರಚನಾಶಾಸ್ತ್ರ – 02 ಹುದ್ದೆಗಳು • ಪಶುವೈದ್ಯಕೀಯ ಶರೀರಶಾಸ್ತ್ರ ಮತ್ತು ಜೀವರಸಾಯನಶಾಸ್ತ್ರ – 03 ಹುದ್ದೆಗಳು • ಜಾನುವಾರು ಉತ್ಪಾದನೆ ಮತ್ತು ನಿರ್ವಹಣೆ – 02 ಹುದ್ದೆಗಳು • ಜಾನುವಾರು ಸಾಕಣೆ ಸಂಕೀರ್ಣ – 04 ಹುದ್ದೆಗಳು • ಪಶುವೈದ್ಯಕೀಯ ಕ್ಲಿನಿಕಲ್ – 04 ಹುದ್ದೆಗಳು
ಶೈಕ್ಷಣಿಕ ಅರ್ಹತೆ;
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿ.ಹೆಚ್.ಡಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಗರಿಷ್ಠ ವಯಸ್ಸಿನ ಮಿತಿ – 38 ವರ್ಷಗಳು
ವಯೋಮಿತಿ ಸಡಿಲಿಕೆ; ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ -05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳ ಕಿರು ಪಟ್ಟಿ
ಸಂದರ್ಶನ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ 57,700ರೂ. ಗಳಿಂದ 2,18,200ರೂ. ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಪ್ರಾಧ್ಯಾಪಕ ಹುದ್ದೆಗೆ ವೇತನ ಶ್ರೇಣಿ: ರೂ.1,44,200-2,78,200 ಸಹ ಪ್ರಾಧ್ಯಾಪಕ ಹುದ್ದೆಗೆ ವೇತನ ಶ್ರೇಣಿ: ರೂ.1,31,400-2,17,100 ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ವೇತನ ಶ್ರೇಣಿ: ರೂ.57,700-1,82,400
ಅರ್ಜಿ ಶುಲ್ಕ:
GM/2A/2B/3A/3B ವರ್ಗದ ಅಭ್ಯರ್ಥಿಗಳಿಗೆ- 1000ರೂ.
ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ – 1000ರೂ.
ಅರ್ಜಿ ಸಲ್ಲಿಸುವ ವಿಧಾನ:
• KVAFSU ನೇಮಕಾತಿ ಅಧಿಕೃತ ವೆಬ್ ಸೈಟ್ “ನೇಮಕಾತಿ” ವಿಭಾಗಕ್ಕೆ – https://kvafsu.edu.in/teaching_posts.htmlಕ್ಕೆ ಭೇಟಿ ನೀಡಿ.
• ಬಳಿಕ ಬೋಧನಾ ಪೋಸ್ಟ್ಗಳು(Teaching Posts) ಶೀರ್ಷಿಕೆಯ ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ – ಬೋಧನಾ ಪೋಸ್ಟ್” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನಂತರ ಬಳಕೆದಾರರ ಹೆಸರು ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
Kvafsu Professor Online Application Form 2025
• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.