ಬೀದರ್ನಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ದ್ವಿತೀಯ ದರ್ಜೆ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಹೊರಡಿಸಿ, ಅರ್ಜಿ ಸ್ವೀಕಾರ ಪ್ರಾರಂಭಿಸಿದೆ.
ಬೆಂಗಳೂರಿನ ಹೆಬ್ಬಾಳದಲ್ಲಿರುವ ಪ್ರಾಣಿ ಮತ್ತು ಪಶುವೈದ್ಯಕೀಯ ಜೈವಿಕ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ (ದ್ವಿತೀಯ ದರ್ಜೆ ಸಹಾಯಕ-01 ಹಾಗೂ ಸ್ಟೆನೋಗ್ರಾಫರ್-01) ಒಟ್ಟು 02 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಬ್ಯಾಕ್ಲಾಗ್ ಅಡಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳ ಅರ್ಹತೆಗಳನ್ನು ಪೂರೈಸುವ ಅರ್ಹ ಪರಿಶಿಷ್ಟ ಪಂಗಡದ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 30ರೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ – ಅಕ್ಟೋಬರ್ 03, 2025
ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆ ದಿನಾಂಕ – ಅಕ್ಟೋಬರ್ 30, 2025
ಶೈಕ್ಷಣಿಕ ಅರ್ಹತೆ:
✓ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಬೇಕು ಹಾಗೂ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಬಳಕೆಯ ಜ್ಞಾನ ಅತ್ಯಗತ್ಯ.
✓ ಸ್ಟೆನೋಗ್ರಾಫರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣ ಹಾಗೂ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಸೀನಿಯರ್ ಗ್ರೇಡ್ ಟೈಪ್ ರೈಟಿಂಗ್ನಲ್ಲಿ ಉತ್ತೀರ್ಣ, ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಸೀನಿಯರ್ ಗ್ರೇಡ್ ಶಾರ್ಟ್ಹ್ಯಾಂಡ್ನಲ್ಲಿ ಉತ್ತೀರ್ಣ ಜೊತೆಗೆ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಬಳಕೆಯ ಜ್ಞಾನ ಅತ್ಯಗತ್ಯ.
ವಯಸ್ಸಿನ ಮಿತಿ:
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 43 ವರ್ಷಗಳು
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ, ಅವರ ಹುದ್ದೆಗಳಿಗೆ ಅನುಗುಣವಾಗಿ 34,100ರೂ. ಗಳಿಂದ 83,700ರೂ. ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
→ ಅರ್ಜಿಗಳ ಸ್ಕ್ರೀನಿಂಗ್ → ಕೌನ್ಸೆಲಿಂಗ್ → ದಾಖಲಾತಿ ಪರಿಶೀಲನೆ → ಅಂತಿಮ ಆಯ್ಕೆ
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು “ಕಂಟ್ರೋಲರ್, KVAFSU, ಬೀದರ್” ಹೆಸರಿನಲ್ಲಿ 500ರೂ. ಸಂಸ್ಕರಣಾ ಶುಲ್ಕವನ್ನುಯಾವುದೇ ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಪಡೆದ ಡಿಮ್ಯಾಂಡ್ ಡ್ರಾಫ್ಟ್ (D.D) ರೂಪದಲ್ಲಿ ಪಾವತಿಸಬೇಕು.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
• KVAFSU ಅಧಿಕೃತ ಜಾಲತಾಣ https://www.kvafsu.edu.in/recruitment_backlog.html ಕ್ಕೆ ಭೇಟಿ ನೀಡಿ
• ಬ್ಲಾಕ್ ಲಾಗ್ ನೇಮಕಾತಿ ಶೀರ್ಷಿಕೆಯ ಕೆಳಗೆ ನೀಡಲಾಗಿರುವ “ನಾನ್ ಟೆಕ್ನಿಂಗ್ ಬ್ಯಾಕ್ಲಾಗ್ ಹುದ್ದೆಯ ಅರ್ಜಿ ಸಲ್ಲಿಕೆ” ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ. (ಅಥವಾ ಇಲ್ಲಿ ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿ)
• ನಂತರ ಅಭ್ಯರ್ಥಿಗಳು ನಿಗದಿತ ಶುಲ್ಕದ ಪಾವತಿಸಿದ ರಶೀದಿಯೊಂದಿಗೆ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ಸ್ವ ವಿವರ, ಶೈಕ್ಷಣಿಕ ದಾಖಲೆ, ಭಾವಚಿತ್ರ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.
• ಅಕ್ಟೋಬರ್ 30ರೊಳಗೆ ಈ ಕೆಳಗಿನ ವಿಳಾಸಕ್ಕೆ ತಲುಪುವಂತೆ ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಕಳುಹಿಸಬೇಕು.
✓ ವಿಳಾಸ: ರಿಜಿಸ್ಟ್ರಾರ್, ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ, ನಂದಿನಗರ, ಪಿ.ಬಿ.ನಂ-06, ಬೀದರ್-585226 ಕರ್ನಾಟಕ
ಅಭ್ಯರ್ಥಿಗಳ ಗಮನಕ್ಕೆ – ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ 03 ಸೆಟ್ಗಳಲ್ಲಿ ಅರ್ಜಿಯನ್ನು ಎಲ್ಲಾ ಲಗತ್ತುಗಳೊಂದಿಗೆ ಸಲ್ಲಿಸಬೇಕು ಹಾಗೂ ಅಭ್ಯರ್ಥಿಗಳಿಗೆ ಕನ್ನಡ ಓದುವುದು, ಬರೆಯುವುದು ಮತ್ತು ಮಾತನಾಡುವ ಜ್ಞಾನ ಕಡ್ಡಾಯವಾಗಿರುತ್ತದೆ.