KVAFSU ವಿಶ್ವವಿದ್ಯಾಲಯದಲ್ಲಿ ಬೋಧನಾ ಸಿಬ್ಬಂದಿಗಳ ನೇಮಕಾತಿಗೆ ಅರ್ಜಿ ಆಹ್ವಾನ

Published on:

ಬೀದರ್‌: ಇಲ್ಲಿನ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಆರ್‌ಪಿಸಿ ವೃಂದದಲ್ಲಿ ಖಾಲಿ ಇರುವ ಒಟ್ಟು 96 ಬೋಧನಾ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

20 ಪ್ರಾಧ್ಯಾಪಕ, 22 ಸಹ ಪ್ರಾಧ್ಯಾಪಕ ಹಾಗೂ 54 ಸಹಾಯಕ ಪ್ರಾಧ್ಯಾಪಕ ಸ್ಥಾನಗಳಿಗೆ ಭರ್ತಿ ನಡೆಯಲಿದೆ. ಬೋಧನಾ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು KVAFSU ಅಧಿಕೃತ ವೆಬ್ಸೈಟ್ https://kvafsu.edu.in/teaching_posts.html ಗೆ ಭೇಟಿ ನೀಡಿ, ಆನ್‌ಲೈನ್ ಮೂಲಕ ಜೂ.20ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಮೇ 21, 2026
  • ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ – ಜೂನ್ 20, 2026

ಶೈಕ್ಷಣಿಕ ಅರ್ಹತೆ:

✓ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪಶುವೈದ್ಯಕೀಯ ವಿಜ್ಞಾನ/ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆ/ಡೈರಿ ವಿಜ್ಞಾನ/ಮೀನುಗಾರಿಕೆ ವಿಜ್ಞಾನದಲ್ಲಿ ಸಂಬಂಧಿತ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ/ಪಿಎಚ್‌ಡಿ ಪದವಿಯನ್ನು ಪೂರ್ಣಗೊಳಿಸಿರಬೇಕು ಹಾಗೂ ಕನಿಷ್ಠ ಬೋಧನಾ/ಸಂಶೋಧನ ಅನುಭವವನ್ನು ಹೊಂದಿರಬೇಕು.

✓ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪಶುವೈದ್ಯಕೀಯ ವಿಜ್ಞಾನ/ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆ/ಡೈರಿ ವಿಜ್ಞಾನ/ಮೀನುಗಾರಿಕೆ ವಿಜ್ಞಾನದಲ್ಲಿ ಸಂಬಂಧಿತ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಹಾಗೂ UGC/ICAR/CSIR ನಡೆಸಿದ ಸಂಬಂಧಿತ ವಿಷಯದಲ್ಲಿ NET ಉತ್ತೀರ್ಣರಾಗಿರಬೇಕು ಅಥವಾ SLET/SET ನಂತಹ UGC ಯಿಂದ ಮಾನ್ಯತೆ ಪಡೆದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು/ಪಿಎಚ್‌ಡಿ ಪದವಿಯನ್ನು ಪೂರ್ಣಗೊಳಿಸಬೇಕು

ವಯೋಮಿತಿ:

• ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ – ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ನಿಯಮಗಳ ಅನುಸಾರ

• ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ-40 ವರ್ಷಗಳು

ವಯೋಮಿತಿ ಸಡಿಲಿಕೆ: 2A, 2B, 3A, 3B ಅಭ್ಯರ್ಥಿಗಳಿಗೆ 03 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-I ಅಭ್ಯರ್ಥಿಗಳಿಗೆ 05 ವರ್ಷಗಳು.

ಆಯ್ಕೆ ವಿಧಾನ:

  • ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
  • ದಾಖಲೆ ಪರಿಶೀಲನೆ
  • ಸಂದರ್ಶನ

ಸಂಬಳ:

ಪ್ರಾಧ್ಯಾಪಕರು ಹುದ್ದೆಗಳಿಗೆ ₹1,44,200-2,18,200/-
ಸಹ ಪ್ರಾಧ್ಯಾಪಕರು ಹುದ್ದೆಗಳಿಗೆ ₹1,31.400-2,17,100/-
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ₹57,700 – 1,82,400/-

ಅರ್ಜಿ ಶುಲ್ಕ:

ಸಾಮಾನ್ಯ ಹಾಗೂ 2A, 2B, 3A, 3B ಅಭ್ಯರ್ಥಿಗಳಿಗೆ ₹1000/-
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-I ಅಭ್ಯರ್ಥಿಗಳಿಗೆ ₹500/-

ಅರ್ಜಿ ಸಲ್ಲಿಸುವ ವಿಧಾನ:

• ಮೊದಲಿಗೆ ಅಭ್ಯರ್ಥಿಗಳು KVAFSU ಅಧಿಕೃತ ವೆಬ್ಸೈಟ್ https://kvafsu.edu.in/teaching_posts.html ಗೆ ಭೇಟಿ ನೀಡಿ.

• ಬಳಿಕ ಬೋಧನಾ ಪೋಸ್ಟ್ ಗಳು ವಿಭಾಗದ ಕೆಳಗೆ ನೀಡಲಾಗಿರುವ *ಬೋಧನಾ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ(https://kkrp.kvafsu.edu.in/login/auth)* ಆಯ್ಕೆಯನ್ನು ಆರಿಸಿ.

Kvafsu Online Application Form
Kvafsu Online Application Form

• ಬಳಕೆದಾರರ ಹೆಸರು ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.

• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

Important Direct Links:

Official Notification PDFDownload
Online Application Form LinkApply Now
Official Websitekvafsu.edu.in
More UpdatesKarnatakahelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment