ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನ| KVLDCL.Karnataka.Gov.In Loan Scheme 2024

Follow Us:

KVLDCL.Karnataka.Gov.In Loan Schemes 2024: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ” ದಿಂದ ನೀಡುವ ವಿವಿಧ ಯೋಜನೆಗಳ (Veerashaiva Lingayat Loan Scheme) ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದಿಂದ ವಿವಿಧ ಸಹಾಯಧನ ಯೋಜನೆಗಳಿಗಾಗಿ ಅರ್ಜಿ ಸಲ್ಲಿಸಬಯಸುವ ಅರ್ಹ ಫಲಾನುಭವಿಗಳು ಈ ಲೇಖನವನ್ನು ಸಂಪೂರ್ಣವಾಗಿ ಓದಿ, ಜೊತೆಗೆ ನಿಮ್ಮ ಹಿತೈಶಿಗಳಿಗೂ ತಪ್ಪದೇ ಶೇರ್ ಮಾಡಿ.

Kvldcl.karnataka.gov.in Loan Schemes
Kvldcl.karnataka.gov.in Loan Schemes

Veerashaiva Lingayat Loan Scheme 2024-25

2024-25ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸುತ್ತಿರುವ ಈ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್‌ ಲೈನ್‌ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

☞ ಬಸವ ಬೆಳಗು ಯೋಜನೆ(BASAVA BELAGU Scheme)
☞ ಜೀವಜಲ ಯೋಜನೆ(Jeeva Jala Jojane)
☞ ಗಂಗಾ ಕಲ್ಯಾಣ ಯೋಜನೆ (Ganga Kalyana Yojane)
☞ ಕಾಯಕಕಿರಣ ಯೋಜನೆ(KAYAKA KIRANA Scheme)
☞ ಭೋಜನಾಲಯ ಕೇಂದ್ರ(Bojanalaya Kendra Scheme)
☞ ವಿಭೂತಿ ನಿರ್ಮಾಣ ಘಟಕ(Vibuthi Nirmana Gataka Scheme)
☞ ಸ್ವಾವಲಂಭಿ ಸಾರಥಿ ಯೋಜನೆ(Swawalambi Sarathi Scheme)
☞ ಸ್ವಯಂ ಉದ್ಯೋಗ ಸಾಲ ಯೋಜನೆ(Self Employment Scheme)
☞ ಶೈಕ್ಷಣಿಕ ಸಾಲ ಯೋಜನೆಗಳು (Educational Loan Schemes Karnataka)

ಶೈಕ್ಷಣಿಕ ಸಾಲ ಯೋಜನೆಗಳು (Educational Loan Schemes Karnataka)

  • ಬಸವ ಬೆಳಗು ಯೋಜನೆ (Fresh Students): ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಅವರ ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷ ಮಿತಿಯಲ್ಲಿರುವ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವಾರ್ಷಿಕ ರೂ. 1.00 ಲಕ್ಷಗಳಂತೆ ಕೊರ್ಸ್‌ನ ಅವಧಿಗೆ ಗರಿಷ್ಠ ರೂ.4.00 ಲಕ್ಷಗಳಿಂದ 5.00 ಲಕ್ಷಗಳವರೆಗೆ ವಾರ್ಷಿಕ ಶೇ.2 ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ವಿದ್ಯಾರ್ಥಿಗಳು CET/NEET ಇತ್ಯಾದಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸರ್ಕಾರಿ ಕೋಟಾದ ಸೀಟು ಪಡೆದಿರಬೇಕು.
  • ಬಸವ ಬೆಳಗು ಯೋಜನೆ (BASAVA BELAGU) (Renewals): 2022-23 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 3ನೇ ಕಂತಿನ ನವೀಕರಣ ಸಾಲ ಹಾಗೂ 2023-24 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು.
  • ವಿದೇಶ ವಿದ್ಯಾವಿಕಾಸ ಯೋಜನೆ (VIDHESHA VIDYAVIKHASA Scheme) (Fresh Students): ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಅವರ ಕುಟುಂಬದ ವಾರ್ಷಿಕ ಆದಾಯ ರೂ.8.00 ಲಕ್ಷಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳು QS World Ranking 500 ರೊಳಗೆ ಬರುವ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್, ಪಿಹೆಚ್ ಡಿ, ಮಾಸ್ಟರ್ ಡಿಗ್ರಿ ಕೋರ್ಸ್‌ಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ.10.00 ಲಕ್ಷಗಳಂತೆ 3ವರ್ಷದ ಅವಧಿಗೆ ಒಟ್ಟು ರೂ. 20.00 ಲಕ್ಷಗಳನ್ನು ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.
  • ವಿದೇಶ ವಿದ್ಯಾವಿಕಾಸ ಯೋಜನೆ (Renewals) 2022-23 ಮತ್ತು 2023-24 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು.

ಜೀವಜಲ ಯೋಜನೆ (Jeeva Jala Jojane 2024):

ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1,20,000/-ಗಳ ಮಿತಿಯೊಳಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆಬಾವಿ ಯೋಜನೆಗೆ ಘಟಕವೆಚ್ಚ ರೂ. 4.75 ಲಕ್ಷಗಳಲ್ಲಿ ರೂ. 4.25 ಲಕ್ಷಗಳು ಸಹಾಯಧನ. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ. 4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಉಳಿದ ಜಿಲ್ಲೆಗಳಿಗೆ ಘಟಕವೆಚ್ಚ ರೂ. 3.75 ಲಕ್ಷಗಳಲ್ಲಿ ರೂ.3.25 ಲಕ್ಷ ಸಹಾಯಧನ. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ. 4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುತ್ತದೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೇ ಜಿಲ್ಲೆಗಳಲ್ಲಿ ಕನಿಷ್ಟ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ Farmer’s FRUIT ID ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಹೊಂದಿರಬೇಕು.

ಕಾಯಕಕಿರಣ ಯೋಜನೆ (KAYAKA KIRANA 2024):

ವೀರಶೈವ-ಲಿಂಗಾಯತ ಸಮುದಾಯದ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಈ ಕೆಳಕಂಡಂತೆ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗುವುದು.
ಘಟಕ ವೆಚ್ಚ ರೂ.1,00,000/- ಗಳಿಗೆ ಶೇ.20ರಷ್ಟು ಗರಿಷ್ಠ ರೂ.20,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.80ರಷ್ಟು ಗರಿಷ್ಠ ರೂ.80,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ
ಮಂಜೂರು ಮಾಡಲಾಗುತ್ತದೆ.

ಘಟಕ ವೆಚ್ಚ ರೂ.2,00,000/- ಗಳಿಗೆ ಶೇ.15ರಷ್ಟು ಗರಿಷ್ಟ ರೂ.30,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.85ರಷ್ಟು ಗರಿಷ್ಠ ರೂ.1,70,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಮಂಜೂರು
ಮಾಡಲಾಗುತ್ತದೆ.

ಭೋಜನಾಲಯ ಕೇಂದ್ರ (Bojanalaya Kendra Scheme 2024):

ಸಮುದಾಯದ ಜನರು ಹೋಟೆಲ್ (ಖಾನಾವಳಿ) ಉದ್ಯಮ ಕೈಗೊಳ್ಳಲು ಈ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲಾಗುವುದು. ಹೋಟೆಲ್ ಉದ್ದಿಮೆ ಕೈಗೊಳ್ಳಲು ಘಟಕ ವೆಚ್ಚ ರೂ. 5.00 ಲಕ್ಷ ಇದರಲ್ಲಿ ರೂ.4,60,000/- ಸಾಲ ಮತ್ತು ರೂ. 40,000/- ಸಹಾಯಧನ ನೆರವು ನೀಡಲಾಗುವುದು, ಹೋಟೆಲ್ ಸ್ಥಾಪನೆ ಮಾಡಲು ಫಲಾನುಭವಿಗಳು ತಮ್ಮ ಸ್ವಂತ ಹೆಸರಿನಲ್ಲಿ ಕನಿಷ್ಠ 20×30 ಅಡಿ ಅಳತೆಯುಳ್ಳ ನಿವೇಶನ ಹೊಂದಿರಬೇಕು.

ವಿಭೂತಿ ನಿರ್ಮಾಣ ಘಟಕ(Vibuthi Nirmana Gataka Scheme 2024):

ವೀರಶೈವ-ಲಿಂಗಾಯತ ಸಮುದಾಯದವರು ವಿಭೂತಿಯನ್ನು ತಯಾರಿಸಲು ಸಾಲ ಮತ್ತು ಸಹಾಯಧನ ನೀಡುವ ಯೋಜನೆ ಇದಾಗಿದೆ. ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳು ಮತ್ತು 18 ರಿಂದ 55
ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು. ವಿಭೂತಿ ನಿರ್ಮಾಣ ಘಟಕ ನಿರ್ಮಿಸಲು ಘಟಕ ವೆಚ್ಚ ರೂ. 4.00 ಲಕ್ಷ ಇದರಲ್ಲಿ ರೂ.3,60,000/- ಸಾಲ ಮತ್ತು ರೂ. 40,000/- ಸಹಾಯಧನ ವಾರ್ಷಿಕ ಶೇ.3 ರ ಬಡ್ಡಿದರದಲ್ಲಿ ನೆರವು ನೀಡಲಾಗುವುದು.

ಸ್ವಾವಲಂಭಿ ಸಾರಥಿ ಯೋಜನೆ: (Swawalambi Sarathi Scheme 2024):

ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಭಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರ ವಾಹನ (ಹಳದಿ ಬೊರ್ಡ್) ಖರೀದಿಗೆ ಪಡೆಯುವ ಸಾಲಕ್ಕೆ ಶೇ.50ರಷ್ಟು ಅಥವಾ ಗರಿಷ್ಠ 3.00 ಲಕ್ಷಗಳ
ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಫಲಾನುಭವಿಗಳು ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿದರದಲ್ಲಿ ಸಾಲ ಪಡೆಯುವುದು.

Also Read: ಸ್ವಾವಲಂಬಿ ಸಾರಥಿ ಅರ್ಜಿ ಸಲ್ಲಿಕೆ ಪ್ರಾರಂಭ | Swavalambi Sarathi 2024 Karnataka Apply Online

ಸ್ವಯಂ ಉದ್ಯೋಗ ಸಾಲ ಯೋಜನೆ (Self Employment Scheme 2024):

ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಕೃಷಿ / ಕೃಷಿ ಅವಲಂಭಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳನ್ನು ಕೊಳ್ಳುವ ಆರ್ಥಿಕ ಚಟುವಟಿಕೆಗಳು/ ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕ್‌ಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ.20 ರಷ್ಟು ಅಥವಾ ಗರಿಷ್ಟ ರೂ. 1.00 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.

ಇಲ್ಲಿ ಗಮನಿಸಿ ಬಂಧುಗಳೇ: ಬೆಂಗಳೂರು-ಒನ್/ಕರ್ನಾಟಕ-ಒನ್/ಆಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿಯನ್ನು ಸಲ್ಲಿಸಲು ಮಾತ್ರ ಅವಕಾಶವಿದೆ. ಸ್ವಯಂ ನೋಂದಣಿಗೆ ಅವಕಾಶವಿಲ್ಲ.

Last Date Of Veerashaiva Lingayat Loan Schemes 2024-25

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Last Date: 31 August 2024

(ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ)

Important Direct Links:

Veerashaiva Lingayat Development loan Scheme 2024-25 Notice PDFDownload
Official Webkvldcl.karnataka.gov.in
More UpdatesKarnatakaHelp.in

FAQs – Veerashaiva Lingayat Development loan Scheme 2024-25

What is the Online Application Form Last Date of KVLDCL.Karnataka.Gov.In Loan Scheme 2024?

August 31, 2024