ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು ಕಾರ್ಮಿಕರ ಸಾಮಾಜಿಕ ಹಿತದೃಷ್ಟಿಯಿಂದ ಕಾರ್ಮಿಕರು ಕೆಲಸದ ವೇಳೆ ಅಪಘಾತದಿಂದಾಗಿ ಸಂಕಷ್ಟಕ್ಕೆ ಸಿಲುಕುವ ಅವರ ಕುಟುಂಬದವರಿಗೆ ನೆರವು ನೀಡಲು ಅಪಘಾತ ಪರಿಹಾರ(Labor Accident Compensation) ಸೌಲಭ್ಯವನ್ನು ಜಾರಿಗೆ ತಂದಿದೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಾರ್ಮಿಕರಿಗೆ ಕೆಲಸದ ವೇಳೆ ಅಪಘಾತ ಸಂಭವಿಸಿದಲ್ಲಿ ಮಂಡಳಿಯು 2 ಲಕ್ಷ ರೂ.ಗಳ ಅಪಘಾತ ಪರಿಹಾರವನ್ನು ನೀಡಲಾಗುತ್ತದೆ. ಸದರಿ ಯೋಜನೆ ಕುರಿತಾದಂತೆ ಅರ್ಹತಾ ಮಾನದಂಡಗಳು, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೀಡಿರುವ ಕಾರ್ಮಿಕರ ಗುರುತಿನ ಚೀಟಿ ಹೊಂದಿರಬೇಕು.
ಕಟ್ಟಡ ಅಥವಾ ಇತರ ನಿರ್ಮಾಣ ಕೆಲಸದಲ್ಲಿ ನಿರತರಾಗಿರಬೇಕು.
ಉದ್ಯೋಗದ ಸಮಯದಲ್ಲಿ ಅಪಘಾತಕ್ಕೀಡಾದ ಅಥವಾ ಮರಣ ಹೊಂದಿದರೆ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ನೈಸರ್ಗಿಕ/ಅನಿರೀಕ್ಷಿತವಾಗಿ ಸಾವು ಸಂಭವಿಸಿದರು ಅರ್ಜಿ ಸಲ್ಲಿಸಬಹುದು.
ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಲ್ಪಟ್ಟ ಗುರುತಿನ ಚೀಟಿಯ ಛಾಯಾಚಿತ್ರ.
ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ.
ಉದ್ಯೋಗದಾತರಿಂದ ಭರ್ತಿ ಮಾಡಿಸಿದ ನಮೂನೆ 21 ಮತ್ತು 21A ಅರ್ಜಿಯನ್ನು ಸಲ್ಲಿಸಬೇಕು.
ಅಪಘಾತದಿಂದ ಮರಣ ಹೊಂದಿದ್ದಲ್ಲಿ, ಮರಣ ಪ್ರಮಾಣಪತ್ರ.
ಮರಣೋತ್ತರ ಪರೀಕ್ಷೆ ವರದಿ
ನಾಮಿನಿಯ ಯಾವುದೇ ಫೋಟೋ ಗುರುತಿನ ಚೀಟಿ.
ಅಪಘಾತ ಸಂಭವಿಸಿದ ಕುರಿತಂತೆ ಎಫ್ ಐ ಆರ್ ಪ್ರತಿ.
ವೈದ್ಯಕೀಯ ವರದಿ.
ಫಲಾನುಭವಿಯು ಮರಣ ಹೊಂದಿದ್ದಲ್ಲಿ ಅವರ ನಾಮನಿರ್ದೇಶಿತರ ಬ್ಯಾಂಕ್ ಪಾಸ್ ಬುಕ್ ಪ್ರತಿ.
ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ.
ದುರ್ಬಲತೆ ಪ್ರಕರಣವಿದ್ದಲ್ಲಿ ದುರ್ಬಲತೆಯ ಶೇಕಡಾವಾರು ಪ್ರಮಾಣ ನಮೂದಿಸಬೇಕು.
ಫಲಾನುಭವಿ ದುರ್ಬಲತೆಯಾದ ನಂತರ ತಪಾಸಣೆ ಮಾಡಿದ ಸರ್ಕಾರಿ / ಸರ್ಕಾರದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆ ವೈದ್ಯರಿಂದ ಶೇಕಡಾವಾರು ದುರ್ಬಲತೆ ಖಚಿತ ಪಡಿಸಿರುವ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.
ಅಪಘಾತ ಸಂಭವಿಸಿದ ಒಂದು ವರ್ಷದೊಳಗೆ ಅರ್ಜಿಯನ್ನು ಸಲ್ಲಿಸಬೇಕು.