Labour Card Prize Money: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ನೋಂದಾಯಿತ ಕಾರ್ಮಿಕರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇದೇ ವರ್ಷದ ಮೇ 2 ಪೂರ್ವದಲ್ಲಿ, ಪಿಯುಸಿ ಪರೀಕ್ಷೆಗೆ ಏ.8 ಪೂರ್ವದಲ್ಲಿ ಮಂಡಳಿಯಲ್ಲಿ ನೋಂದಣಿಯಾಗಿರಬೇಕು. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ https://karbwwb.karnataka.gov.in/ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಪ್ರೋತ್ಸಾಹಧನಕ್ಕೆ(Labour Card Education Assistanc) ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಜುಲೈ 31, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 15, 2025
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
• ಅರ್ಜಿ ಸಲ್ಲಿಸ ಬಯಸುವ ವಿದ್ಯಾರ್ಥಿಗಳು 2024-25ನೇ ಶೈಕ್ಷಣಿಕ ವರ್ಷದ 2025ರಲ್ಲಿ ನಡೆದ ಪರೀಕ್ಷೆಯಲ್ಲಿ SSLC ಮತ್ತು PUC ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು.
• SSLC ಪರೀಕ್ಷೆಗೆ ಸಂಬಂಧಿಸಿದಂತೆ ಫಲನುಭವಿಯು ದಿನಾಂಕ – 02-05-2025 ರ ಪೂರ್ವದಲ್ಲಿ ಮಂಡಳಿಯಲ್ಲಿ ನೋಂದಣಿಯಾಗಿರಬೇಕು.
• PUC ಪರೀಕ್ಷೆಗೆ ಸಂಬಂಧಿಸಿದಂತೆ ಫಲನುಭವಿಯು ದಿನಾಂಕ – 08-04-2025 ರ ಪೂರ್ವದಲ್ಲಿ ಮಂಡಳಿಯಲ್ಲಿ ನೋಂದಣಿಯಾಗಿರಬೇಕು.